Breaking News

ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ನೇಣಿಗೆ ಶರಣು.!! – ಹುಟ್ಟುಹಬ್ಬದ ದಿನವೇ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ

Spread the love

ಬೆಳಗಾವಿ: ಕೆಲ ದಿನಗಳ ಹಿಂದಷ್ಟೇ ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಮಾಡಿಕೊಂಡಿದ್ದ ಯುವತಿಯೊಬ್ಬಳು ಜನ್ಮದಿನದಂದೇ ನೇಣಿಗೆ ಶರಣಾದ ಘಟನೆ ಬೆಳಗಾವಿಯ ಅಜಂ ನಗರದ ಹಾಸ್ಟೆಲ್‌ನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ‌ (21) ಎಂದು ಗುರುತಿಸಲಾಗಿದೆ. ಯುವತಿ ಅಂತಿಮ ವರ್ಷದ ಬಿಎಸ್‌ಸಿ ಪದವಿ ಓದುತ್ತಿದ್ದಳು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿದ್ದುಕೊಂಡು ಯುವತಿ ವ್ಯಾಸಾಂಗ ಮಾಡುತ್ತಿದ್ದಳು. ಇತ್ತೀಚೆಗೆ‌ ಕುಟುಂಬಸ್ಥರು ಪೊಲೀಸ್ ಪೇದೆಯೊಬ್ಬರ ಜೊತೆ ಮದುವೆ ನಿಶ್ಚಯ ಮಾಡಿದ್ದರು.

ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಸಿಪಿಐ ಉಸ್ಮಾನ್ ಆವಟಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ