Breaking News

ಬೈಕ್ ಬೆನ್ನಟ್ಟಿ ಬಂದು ಗುಂಡಿನ ದಾಳಿ – ಆಪ್ ನಾಯಕನ ಬರ್ಬರ ಹತ್ಯೆ

Spread the love

ಚಂಡೀಗಢ: ಆಮ್ ಆದ್ಮಿ ಪಕ್ಷದ ನಾಯಕರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಮಮ್ದೋಟ್ ಪಟ್ಟಣದಲ್ಲಿ ನಡೆದಿದೆ.

ಗುರುಪ್ರೀತ್ ಸಿಂಗ್ ಗೋಪಿ ಹತ್ಯೆಯದ ಆಪ್ ನಾಯಕ. ಗುರುಪ್ರೀತ್ ಮತ್ತು ಹರ್‌ಪ್ರೀತ್ ಎಂಬ ವ್ಯಕ್ತಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಕಾರಿನಲ್ಲಿ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅವರನ್ನು ಬೆನ್ನಟ್ಟಿದ್ದಾರೆ. ಬಳಿಕ ಬೈಕ್‌ಗೆ ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗುರುಪ್ರೀತ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಭೂಪಿಂದರ್ ಸಿಂಗ್ ಸಿಧು ತಿಳಿಸಿದ್ದಾರೆ.

ಗುರುಪ್ರೀತ್ ಹಾಗೂ ಹರ್‌ಪ್ರೀತ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅವರ ಕೆಲ ಸ್ನೇಹಿತರು ಮತ್ತೊಂದು ಕಾರಿನಲ್ಲಿ ಹಿಂಬಾಲಿಸುತ್ತಿದ್ದರು. ದುಷ್ಕರ್ಮಿಗಳು ಆ ಕಾರಿನ ಮೇಲೂ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯ ಹಿಂದೆ ಹಳೆಯ ವಿವಾದವೊಂದು ಇರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ವಿವಾದ ಪ್ರಮುಖ ಕಾರಣವಾಗಿರಬಹುದು ಎಂಬ ಕೋನದಲ್ಲಿ ತನಿಖೆ ನಡೆಯುತ್ತಿದೆ.

ಘಟನೆ ನಡೆದಿದ್ದು ಹೇಗೆ?
ಗುರುಪ್ರೀತ್ ಮತ್ತು ಹರ್‌ಪ್ರೀತ್ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಹಿಂಬಾಲಿಸಿದ್ದಾರೆ. ಬಳಿಕ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇದೇ ವೇಳೆ ಅವರ ಸ್ನೇಹಿತರು ಪ್ರಯಾಣಿಸುತ್ತಿದ್ದ ಮತ್ತೊಂದು ಕಾರಿನ ಮೇಲೂ ಗುಂಡು ಹಾರಿಸಲಾಗಿದೆ.

ಮತ್ತೊಂದು ವಾಹನದ ಮೇಲೆ ಗುಂಡಿನ ದಾಳಿ ನಡೆಸಿರುವ ಹಿಂದಿನ ಕಾರಣ ಏನು ಎಂಬುದನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಎರಡೂ ಕಡೆಯವರ ನಡುವೆ ಹಳೆಯ ವಿವಾದವಿತ್ತು. ದಾಳಿಕೋರರನ್ನು ಗುರುತಿಸಲಾಗಿದೆ. ಅವರನ್ನು ಬಂಧಿಸಲು ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು, ಎಂದು ಭೂಪಿಂದರ್ ಸಿಂಗ್ ಸಿಧು ತಿಳಿಸಿದ್ದಾರೆ.

ಪ್ರಮುಖ ಆರೋಪಿ ಈಗಾಗಲೇ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಬಂಧಿಸಲು ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ವಿವಿಧ ಸ್ಥಳಗಳಲ್ಲಿ ದಾಳಿ ಮತ್ತು ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಸದ್ಯ ಪೊಲೀಸರು ಆರೋಪಿಗಳ ಪತ್ತೆಗೆ ತೀವ್ರ ಶೋಧ ನಡೆಸುತ್ತಿದ್ದು, ಪ್ರಕರಣದ ಸಂಪೂರ್ಣ ಹಿನ್ನೆಲೆ ಹಾಗೂ ಗುಂಡಿನ ದಾಳಿಯ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಚಿಕ್ಕಮಗಳೂರಲ್ಲಿ ಆಹಾರ ಇಲಾಖೆ ಅಧಿಕಾರಿಗಳ ದಾಳಿ – 30 ಕೆಜಿ ನಕಲಿ ನಾಟಿ ತುಪ್ಪ ಪತ್ತೆ

Spread the loveಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯಲ್ಲಿನ ಮನೆಯೊಂದರ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ 30 ಕೆ.ಜಿ.ಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ