Breaking News
Home / ಜಿಲ್ಲೆ / ಬೆಳಗಾವಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಅಂಗಡಿ ವ್ಯಾಪರಸ್ಥರ ಜೊತೆಗೆ ಸಭೆ,: ಶಾಸಕ ಅಭಯ ಪಾಟೀಲ,ಅನಿಲ ಬೆನಕೆ

ಬೆಳಗಾವಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಅಂಗಡಿ ವ್ಯಾಪರಸ್ಥರ ಜೊತೆಗೆ ಸಭೆ,: ಶಾಸಕ ಅಭಯ ಪಾಟೀಲ,ಅನಿಲ ಬೆನಕೆ

Spread the love

ಬೆಳಗಾವಿ:  ಕೊರೋನಾ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿರುವ ಪ್ರದೇಶಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ನಿಷೇಧಿತ ವಲಯದಲ್ಲಿ ಕೆಲ ಜನರು ಮಾಸ್ಕ್ ಧರಿಸದೇ ಓಡಾಡುತ್ತಿದ್ದು, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಗಾವಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಭಾನುವಾರ ಕೊರೋನಾ ವೈರಾಣು ಸೋಂಕಿನ ತಡೆಯುವಿಕೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಔಷದಿ ಅಂಗಡಿ ಹಾಗೂ ಕಿರಾಣಿ ಅಂಗಡಿ ವ್ಯಾಪರಸ್ಥರ ಜೊತೆಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.
ಕೊರೋನಾ ಸೋಂಕಿನ ಪ್ರಕರಣ ಪತ್ತೆಯಾಗಿರುವ ಪ್ರದೇಶಗಳಲ್ಲಿ ಕೆಲವರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಇದರಿಂದಾಗಿ, ಕೊರೋನಾ ನಿಯಂತ್ರಣಕ್ಕೆ ತೊಡಕಾಗುವ ಸಾಧ್ಯತೆಗಳಿವೆ. ಹಾಗಾಗಿ, ಬೇಕಾ ಬಿಟ್ಟಿಯಾಗಿ ಓಡಾಡುವವರ ಮೇಲೆ ಡ್ರೋನ್ ಕ್ಯಾಮೆರಾ ಹದ್ದಿನ ಕಣ್ಣಿಡುವ ಮೂಲಕ ಅವರ ವಿರುದ್ಧ ಕಠಿಣಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಬೆಳಗಾವಿ ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆಘಾತಕಾರಿಯಾಗಿದೆ. ಕೊರೋನಾ ಬಗ್ಗೆ ನಾವು ಭಯ ಪಡುವ ಅಗತ್ಯವಿಲ್ಲ. ಜಾಗೃತಿಯೊಂದೇ ಇದಕ್ಕೆ ಪರಿಹಾರವಾಗಿದೆ. ಕೊರೋನಾ ಸೋಂಕಿನ ನಿಯಂತ್ರಣದಲ್ಲಿ ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಪಾತ್ರ ಬಹಳ ಮುಖ್ಯವಾಗಿದೆ. ಇದಕ್ಕೆ ನಾಗರಿಕರು ಸಹಕಾರವೂ ಅಷ್ಟೇ ಮುಖ್ಯವಾಗಿದೆ ಎಂದು ಹೇಳಿದರು.
ಜನರು ಯಾವುದೇ ಕಾರಣಕ್ಕೂ ಮನೆ ಬಿಟ್ಟು ಹೊರಗೆ ಬರಬಾರದು. ಜನರಿಗೆ ಅಗತ್ಯ ವಸ್ತುಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ನಮ್ಮದಾಗಿದೆ. ಹಾಗಾಗಿ,  ನಗರದ ಎಲ್ಲ ಪ್ರಮಖ ಸ್ಥಳಗಳಲ್ಲಿ ಒಂದು ಕಡೆ ಸಾಮಗ್ರಿ ಸಂಗ್ರಹಿಸಿ,  ಜನರ ಮನೆ ಮನೆಗಳಿಗೆ ಸ್ವಯಂ ಸೇವಕರು ಹಾಗೂ ಪಾಲಿಕೆ ಸಿಬ್ಬಂದಿ ಮೂಲಕ ವಿತರಿಸುವ ಕಾರ್ಯವನ್ನು ಮಾಡಬೇಕಿದೆ. ತರಕಾರಿ, ಹಾಲು ಸೇರಿದಂತೆ ಅಗತ್ಯವಸ್ತುಗಳನ್ನು ಜನರ ಮನೆ ಬಾಗಿಲಿಗೆ ಮುಟ್ಟಿಸಬೇಕಿದೆ ಎಂದರು.
ಔಷಧಿ ಅಂಗಡಿ ಮಾಲೀಕರು ವೈದ್ಯರ ಶಿಫಾರಸು ಇಲ್ಲದೇ ಔಷಧಿ, ಮಾತ್ರೆ ಮಾರಾಟ ಮಾಡಬಾರದು. ಕಿರಾಣಿ ಅಂಗಡಿಯವರು ತಮ್ಮ ಅಂಗಡಿಯಿಂದ ನೇರವಾಗಿ ದಿನಸಿ ಸಾಮಗ್ರಿಗಳನ್ನು ಮಾರಾಟಮಾಡದೇ, ಗ್ರಾಹಕರ ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸ ಮಾಡಬೇಕು. ಈ ಮೂಲಕ ನಾವು ಜನಸಂದಣಿಯನ್ನು ನಿಯಂತ್ರಣ ಮಾಡುವ ಮೂಲಕ ಕೊರೋನಾ ವಿರುದ್ಧ ಹೋರಾಡಬೇಕಿದೆ.
ಅಲ್ಲದೇ, ಅಗತ್ಯ ಸೇವೆಗಳಿಗೆ ಈಗಾಗಲೇ ವಿತರಿಸಲಾಗಿರುವ ಪಾಸ್‌ಗಳನ್ನು ಬದಲಾಯಿಸಿ, ಬೇರೆ ಪಾಸ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳಗಾವಿ ಉತ್ತರ ಶಾಸಕ ಅನಿಲ ಬೆನಕೆ ಅವರು ಮಾತನಾಡಿ, ಮಹಾಮಾರಿ ಕೊರೋನಾ ಸೋಂಕಿನ ತಡೆಗೆ ಕೇಂದ್ರ ಮತ್ತು ರಾಜ್ಯಸರ್ಕಾರ ಲಾಕ್‌ಡೌನ್ ಆದೇಶ ಹೊರಡಿಸಿದೆ. ನಾಗರಿಕರೆಲ್ಲರೂ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲನೆ ಮಾಡಬೇಕು. ಅನವಶ್ಯಕವಾಗಿ ಮನೆಯಿಂದ ಹೊರಬರಬಾರದು. ನಾವೆಲ್ಲರೂ ಸೇರಿ ಕೊರೋನಾದಿಂದ ಜಿಲ್ಲೆಯನ್ನು ಮುಕ್ತಮಾಡಲು ಶ್ರಮಿಸೋಣ.  ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಗಂಭೀರ ವಿಚಾರವಾಗಿದ್ದರೂ ಬೇಕಾಬಿಟ್ಟಿಯಾಗಿ ಸಂಚರಿಸುತ್ತಿರುವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಹಾನಗರ ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್., ಸ್ಮಾರ್ಟಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪ್ರೀತಂ ನಸಲಾಪುರೆ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಹಾಗೂ ವ್ಯಾಪಾರಸ್ಥರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಸವದತ್ತಿ: ಬಹಿರ್ದೆಸೆ ತಾಣವಾದ ಚಿಕ್ಕುಂಬಿ ಕೆರೆ, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

Spread the loveಸವದತ್ತಿ: ಗ್ರಾಮಸ್ಥರ ಜೀವನಾಡಿಯಾಗಿದ್ದ ಚಿಕ್ಕುಂಬಿ ಕೆರೆ ಇದೀಗ ಬಹಿರ್ದೆಸೆ ತಾಣವಾಗಿ ಮಾರ್ಪಟ್ಟಿದೆ. ಗ್ರಾಮ ಪ್ರವೇಶಿಸುತ್ತಿದ್ದಂತೆ ದುರ್ವಾಸನೆಯೇ ಸ್ವಾಗತಿಸುತ್ತದೆ.   …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ