Breaking News

ಸೈನಿಕರ ವಿರುದ್ಧ ಕಾರ್ಯಕ್ರಮ – ಅಜೀಂ ಪ್ರೇಮ್‌ಜಿ ವಿವಿ ವಿರುದ್ಧ ಎಬಿವಿಪಿ ಪ್ರತಿಭಟನೆ

Spread the love

ಬೆಂಗಳೂರು: ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ  ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌  ಪ್ರತಿಭಟನೆ ನಡೆಸಿದೆ.

ಸಂಜೆ ವಿವಿ ಆವರಣಕ್ಕೆ ನುಗ್ಗಿದ ಎಬಿವಿಪಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ವಿವಿಯ ನಾಮಫಲಕಕ್ಕೆ ಕಪ್ಪುಮಸಿ ಬಳಿದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಸರ್ಜಾಪುರ ಪೊಲೀಸರು ತೆರಳಿ ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೂ ಪತ್ರ ಬರೆದಿರುವ ಎಬಿವಿಪಿ, ಅಜೀಂ ಪ್ರೇಮ್‌ಜಿ ವಿವಿಯ ಮಾನ್ಯತೆ ರದ್ದುಪಡಿಸಬೇಕೆಂದು ಒತ್ತಾಯಿಸಿದೆ.
ಅಖಿಲ ಭಾರತೀಯ ವಿದ್ಯಾರ್ಥಿ ಸಂಘ AISA ಪ್ರಾಯೋಜಿತ SPARK ಎನ್ನುವ ಸಂಸ್ಥೆಯ ಮೂಲಕ ಅಜೀಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ದೇಶವಿರೋಧಿ ಚಿಂತನೆಗಳ ಕೂಟಗಳನ್ನು ನಡೆಸಿದೆ.

ದೇಶದ ಗಡಿ ಕಾಯುವ ಸೈನಿಕರನ್ನು ಅತ್ಯಾಚಾರಿಗಳು, ಹಿಂಸಾಚಾರಿಗಳು ಎನ್ನುವಂತೆ ಬಿಂಬಿಸುವ ಕಾರ್ಯಕ್ರಮ ಮಾಡಿದ್ದಾರೆ. ಭಾರತದ ಮುಕುಟಮಣಿ ಕಾಶ್ಮೀರ ಭಾರತದ ಭಾಗವಲ್ಲ,ಕಾಶ್ಮೀರವನ್ನು ಸ್ವತಂತ್ರಗೊಳಿಸಿ ಎನ್ನುವ ದೇಶವಿರೋಧಿ ಕಾರ್ಯಕ್ರಮಗಳ ಮೂಲಕ ಭಾರತದ ಸಮಗ್ರತೆಗೆ ಧಕ್ಕೆ ತರುವ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.

ಅಪರೇಷನ್ ಸಿಂಧೂರ ಸೈನಿಕ ಕಾರ್ಯಾಚರಣೆಯನ್ನು ಖಂಡಿಸುವ ಚಟುವಟಿಕೆಗಳು ನಡೆಸುತ್ತಿದ್ದರು. ನಕ್ಸಲ್‌ವಾದ ಹಾಗೂ ಮಾವೋವಾದಿಗಳನ್ನು ಬೆಂಬಲಿಸಿ ಕಾರ್ಯಕ್ರಮಗಳನ್ನು ನಡೆಸುತ್ತಾ ಇದ್ದರು.

Spread the love

About Laxminews 24x7

Check Also

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ದೆಹಲಿಗೆ ಭೇಟಿ ನೀಡೋದ್ರಲ್ಲಿ ತಪ್ಪಿಲ್ಲ: ಸಿದ್ದರಾಮಯ್ಯ

Spread the loveಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ