Breaking News

ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ: ಮೃತಳ ಮೈಮೇಲಿದ್ದ ಚಿನ್ನಾಭರಣಗಳನ್ನು ಕದ್ದೊಯ್ದ ಕಳ್ಳರು

Spread the love

ಉಡುಪಿ: ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಕಳ್ಳರು ಮೃತ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ.

ಮೇ 17ರಂದು ತಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಕೊಲ್ಲೂರಿನ ದಳಿ ಎಂಬಲ್ಲಿ ಕೇರಳಂ ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಜೀಪಿಗೆ ಮೀನು ಸಾಗಾಟ ಇನ್ಸುಲೇಟರ್ ವಾಹನವೊಂದು ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಜ್ಯೋತಿ ಹಾಗೂ ಅರಿಯಾ ಅನೂಫ್ ​ಮೃತಪಟ್ಟಿದ್ದು, ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಆದರೆ, ಅಪಘಾತದ ಕರುಣಾಜನಕ ಪರಿಸ್ಥಿತಿಯಲ್ಲೂ ಕಳ್ಳರು ಮೃತ ಮಹಿಳೆ ಜ್ಯೋತಿ ಅವರ ಮೈಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಕದ್ದೊಯ್ದಿದ್ದಾರೆ.

ಅಪಘಾತ ನಡೆದ ಸ್ಥಳದಲ್ಲಿ ಸೃಷ್ಟಿಯಾಗಿದ್ದ ಗೊಂದಲದ ವಾತಾವರಣವನ್ನೇ ಬಂಡವಾಳ ಮಾಡಿಕೊಂಡ ಖದೀಮರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದು ಒಂದು ವಾರದ ಬಳಿಕ ಜ್ಯೋತಿ ಅವರ ಕುಟುಂಬಸ್ಥರಿಗೆ ಚಿನ್ನ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದ್ದು, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚಿನ್ನಾಭರಣ ಕದ್ದ ಕಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಳ – ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಮುನಿಯಪ್ಪ

Spread the loveಬೆಂಗಳೂರು: ಬಿಪಿಎಲ್  ಕಾರ್ಡ್‌ಗೆ ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯನ್ನು 3 ಲಕ್ಷ ರೂ.ವರೆಗೆ ಹೆಚ್ಚಿಸುವ ಬಗ್ಗೆ ಸರ್ಕಾರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ