Breaking News

ಕಾರು-ಕಂಟೇನರ್ ಮುಖಾಮುಖಿ ಡಿಕ್ಕಿ: ಕಾರು ಚಾಲಕ ಸಹಿತ ಸ್ಥಳದಲ್ಲೇ ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ

Spread the love

ಖಾನಾಪುರ: ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಗರಾಳಿ ಬಳಿ ಕಾರು-ಕಂಟೇನರ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

 

 

 

ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದ ಕಾರು ಚಾಲಕ ಸಾಗರ ಬಿಡಕರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ಇನ್ನೊಬ್ಬ ಬಾಲಕನಾಗಿದ್ದು ಹೆಸರು ತಿಳಿದುಬರಬೇಕಿದೆ. ಅಳ್ನಾವರದ ಗಿರೀಶ್ ನಾಂದೋಲ್ಕರ್, ವೀರಣ್ಣ ಕೋಟಾರಶೆಟ್ಟಿ,

ರೇಮಾಕಾಂತ ಪಾಲ್ಕರ್, ವಿಠ್ಠಲ ಕಾಕಡೆ ಅವರಿಗೆ ಗಂಭೀರ ಗಾಯಗಳಾಗಿವೆ.

 

ಕಾರಿನಲ್ಲಿದ್ದ ಯುವಕರು ಗೋವಾಕ್ಕೆ ಹೊರಟಿದ್ದರು. ಈ ವೇಳೆ ಕಾರಿಗೆ ಕಂಟೇನರ್ ಡಿಕ್ಕಿ ಹೊಡೆಯಿತು. ಕಾರಿನ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದೆ. ಸ್ಥಳಕ್ಕೆ ಖಾನಾಪುರ ಪೊಲೀಸರ ಭೇಟಿ ಮೃತದೇಹ ಹೊರತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ