Breaking News

ತುಮಕೂರಿನ ಬಳಿ ರಸ್ತೆ ಅಪಘಾತ: ಮಹಿಳೆ ಸಾವು, ನಾಲ್ವರ ಸ್ಥಿತಿ ಗಂಭೀರ

Spread the love

ತುಮಕೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ತೊಡಗಿದ್ದ ವಾಹನ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಕಾರಿನಲ್ಲಿದ್ದ ಶಶಿಕಲಾ(50) ಅಪಘಾತದಲ್ಲಿ ಮೃತಪಟ್ಟ ಮಹಿಳೆ. ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ತೀಮ್ಲಾಪುರ ಗ್ರಾಮದ ಬಳಿ ರಸ್ತೆ ಕಾಮಗಾರಿ ನಡೆಯುತ್ತಿತ್ತು. ನೀರು ತುಂಬಿದ ಟ್ಯಾಂಕರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ. ತಾಲೂಕಿನ ಸೂಗೂರು ಮತ್ತಿಘಟ್ಟ ಗ್ರಾಮದವರಾಗಿದ್ದು, ದೇವಾಲಯಕ್ಕೆ ತೆರಳಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಇನ್ನೂ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ