Breaking News

ಭೀಕರವಾಗಿ ಮರಕ್ಕೆ ಗುದ್ದಿದ ಕಾರು; ಐದು ವರ್ಷದ ಮಗು ಸೇರಿ ಮೂರು ಸಾವು

Spread the love

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐದು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಕುಂದಾಪುರ ಮೂಲದ ಧೃತಿ (5), ಗೀತಾ(32), ಶಾರದಾ (60) ಮೃತ ದುರ್ದೈವಿಗಳು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ದುರ್ಘಟನೆ ನಡೆದಿದೆ.

ಕಾರಿನಲ್ಲಿದ್ದವರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ