ದಾವಣಗೆರೆ : ಟಿಪ್ಪರ್-ಲಾರಿಗೆ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಲಾರಿಗೂ ತಗಲು ಸುಟ್ಟು ಕರಕಲಾದ ಘಟನೆ ನಡೆದಿದೆ.
ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಾಗುತ್ತಿದ್ದ ಕಾರು, ದಾವಣಗೆರೆ ಕಡೆಯಿಂದ ಬರುತ್ತಿದ್ದಂತ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯಿಂದಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡು, ಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದಂತವರು ಕಾರಿನಿಂದ ಕೇಳಗೆ ಇಳಿದುಕೊಂಡಿದ್ದಾರೆ. ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು, ಬೆಂಕಿ ನಂದಿಸಿದ್ದಾರೆ. ದಾವಣಗೆರೆ ದಕ್ಷಿಣ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7