ವಿಜಯಪುರ: ಲಾರಿ ಹಾಗೂ ಥವೇರಾ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕ್ರೀಡಾಪಟುಗಳು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಗಾರ ಕ್ರಾಸ್ ಬಳಿ ಸಂಭವಿಸಿದೆ.

ಮಹಾರಾಷ್ಟ್ರದ ಸೊಲ್ಲಾಪುರದಿಂದ ಹುಬ್ಬಳ್ಳಿಯ ಕಬ್ಬಡ್ಡಿ ಟೂರ್ನಿಯಲ್ಲಿ ಭಾಗವಹಿಸಲು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಸೋಹೈಲ್ ಮತ್ತು ಮಹಾದೇವ ಎಂಬ 20 ವರ್ಷದ ಕ್ರೀಡಾಪಟುಗಳು ಸಾವಿಗೀಡಾಗಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ.
ಥವೇರಾ ವಾಹನಕ್ಕೆ ಮುಖಾಮುಖಿಯಾಗಿ ಲಾರಿ ಡಿಕ್ಕಿ ಹೊಡೆದ ಪರಿಣಾಮ, ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮುಂದೆ ಕುಳಿತಿದ್ದ ಇಬ್ಬರು ಕ್ರೀಡಾಪಟುಗಳು ಪ್ರಾಣವನ್ನ ಕಳೆದುಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದ ಹಾಗೇ ಪ್ರಕರಣ ದಾಖಲು ಮಾಡಿಕೊಂಡಿರುವ ಕೊಲ್ಹಾರ ಠಾಣೆಯ ಪೊಲೀಸರು ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.

Laxmi News 24×7