Breaking News

ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಸಾವು

Spread the love

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ, ಭಾನುವಾರ ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ.

ಜಿಲ್ಲೆಯ ನನೂರ್ ಪ್ರದೇಶದ ಇಟ್ಟಿಗೆ ಗೂಡೊಂದರಲ್ಲಿ ತಪ್ಪಿಸಿಕೊಳ್ಳಲು ಯತ್ನಿಸುವ ವೇಳೆ ಪೊಲೀಸರ ಮೇಲೆ ಗುಂಡು ಹಾರಿಸಿದ್ದ ರತನ್ ಶೇಖ್ ಸಾವನ್ನಪ್ಪಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವೆಂಬರ್ 13ರಂದು ಶಾಂತಿನಿಕೇತನ ಪೊಲೀಸ್ ಠಾಣೆ ವ್ಯಾಪ್ತಿಯ ಲೈಕ್ ಬಜಾರ್‌ನಲ್ಲಿ ಬಂಧನಕ್ಕೆ ಯತ್ನಿಸಿದ ಸಂದರ್ಭದಲ್ಲಿ ರತನ್ ಶೇಖ್, ಕಾನ್‌ಸ್ಟೆಬಲ್ ಬಿಸ್ವಜಿತ್ ದಾಸ್ ಮೇಲೆ ಗುಂಡು ಹಾರಿಸಿದ್ದ ಎನ್ನಲಾಗಿದೆ. ಘಟನೆಯಲ್ಲಿ ಕಾನ್‌ಸ್ಟೆಬಲ್ ಅವರ ಕಾಲಿಗೆ ಗಾಯವಾಗಿತ್ತು. ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ.

ಆತನಿಗಾಗಿ ಶೋಧ ನಡೆಸುತ್ತಿದ್ದ ಪೊಲೀಸರು, ಭಾನುವಾರ ನನೂರ್‌ನ ಇಟ್ಟಿಗೆ ಗೂಡಿನಲ್ಲಿ ಪತ್ತೆಹಚ್ಚಿದ್ದಾರೆ. ಈ ವೇಳೆ ಬಂಧನದಿಂದ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ರತನ್ ಶೇಖ್ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಕೌಂಟರ್ ಬಗ್ಗೆ ಸಿಎಂ ಪ್ರತಿಕ್ರಿಯೆ
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಯಾರಾದರೂ ಪೊಲೀಸರ ಮೇಲೆ ಗುಂಡು ಹಾರಿಸಿದರೆ, ಪೊಲೀಸರು ಅವರಿಗೆ ಸಿಹಿತಿಂಡಿ ನೀಡಬೇಕೇ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಆರು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಐದನೇ ಪೊಲೀಸ್ ಎನ್‌ಕೌಂಟರ್ ಇದಾಗಿದೆ.


Spread the love

About Laxminews 24x7

Check Also

ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಸಾವು

Spread the loveಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ, ಭಾನುವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ