Breaking News

ಮೈಸೂರು ಅರಮನೆಗೆ ನಟಿ ಕಾಜಲ್ ಅಗರ್ವಾಲ್ ಭೇಟಿ – ಸೆಲ್ಫಿಗೆ ಮುಗಿಬಿದ್ದ ಜನ

Spread the love

ಮೈಸೂರು: ದಸರಾ ಆಗಮನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಮೈಸೂರು ಅರಮನೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಈ ನಡುವೆ ನಟಿ ಕಾಜಲ್ ಅಗರ್ವಾಲ್ ಮೈಸೂರು ಅರಮನೆಗೆ ಭೇಟಿ ನೀಡಿದ್ದಾರೆ.

ಅರಮನೆಗೆ ಆಗಮಿಸಿದ ಕಾಜಲ್ ಅಗರ್ವಾಲ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ವೇಳೆ ಅರಮನೆಯ ಇತಿಹಾಸ ಮತ್ತು ಮಹತ್ವದ ಬಗ್ಗೆ ಅಧಿಕಾರಿಗಳು ನಟಿಗೆ ವಿವರಿಸಿದರು. ಇದಕ್ಕಾಗಿ ಕಾಜಲ್ ಅಗರ್ವಾಲ್ ಅವರು ಧನ್ಯವಾದ ಅರ್ಪಿಸಿದರು.

ಅರಮನೆಯ ವೈಭವಕ್ಕೆ ಕಾಜಲ್ ಅಗರ್ವಾಲ್ ಕಣ್ತುಂಬಿಕೊಂಡರು. ನಟಿ ಅರಮನೆಗೆ ಭೇಟಿ ನೀಡಿರುವ ವಿಷಯ ತಿಳಿಯುತ್ತಿದ್ದಂತೆ ಅವರನ್ನು ನೋಡಲು ಪ್ರವಾಸಿಗರು ಹಾಗೂ ಅಭಿಮಾನಿಗಳು ಮುಗಿಬಿದ್ದರು.

ನೆಚ್ಚಿನ ನಟಿಯೊಂದಿಗೆ ಫೋಟೋ ಹಾಗೂ ಸೆಲ್ಫಿ ಕ್ಲಿಕ್ಕಿಸಿಕೊಂಡು ಅಭಿಮಾನಿಗಳು ಸಂಭ್ರಮಿಸಿದರು.


Spread the love

About Laxminews 24x7

Check Also

ದೇವರ ಕೋಣೆಯಲ್ಲೇ ಕೆಜಿಗಟ್ಟಲೆ ಗಾಂಜಾ ಸಂಗ್ರಹ; 22 ವರ್ಷದ ಯುವಕ ಅರೆಸ್ಟ್

Spread the loveಗದಗ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 22 ವರ್ಷದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಗದಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ