Breaking News

ಹೋಟೆಲ್ ಬಳಿಕ ಈಗ ಹಾಸ್ಟೆಲ್, ಪಿಜಿಗಳ ಸರದಿ – ಫುಡ್ ಟೆಸ್ಟ್‌ಗೆ ಖಾದರ್ ಸೂಚನೆ

Spread the love

ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ ಆರೋಗ್ಯ ಸಚಿವ ಯುಟಿ ಖಾದರ್  ಅವರು ಸೂಚನೆ ನೀಡಿದ್ದಾರೆ.

ಆರೋಗ್ಯ ಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಹಾಸ್ಟೆಲ್‌ಗಳು, ಖಾಸಗಿ ಹಾಸ್ಟೆಲ್‌ಗಳು ಮತ್ತು ಸಹಕಾರಿ ಹಾಸ್ಟೆಲ್‌ಗಳಲ್ಲಿನ ಆಹಾರ ತಪಾಸಣೆ ಮಾಡಲಾಗುವುದು. ಈ ವೇಳೆ ಆಹಾರ ಗುಣಮಟ್ಟ, ಸ್ವಚ್ಛತೆ ಮತ್ತು ಆಹಾರ ಪದಾರ್ಥಗಳ ಸಂಗ್ರಹಣೆ ಬಗ್ಗೆ ತಪಾಸಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಪಿಜಿಗಳಲ್ಲಿಯೂ ಕೂಡ ಟೆಸ್ಟ್ ಮಾಡಿಸುತ್ತೇವೆ. ಎಲ್ಲಾ ಕಡೆಯ ಹಾಸ್ಟೆಲ್, ಪಿಜಿಯಲ್ಲಿ ಫುಡ್ ಟೆಸ್ಟ್ ಮಾಡಿಸುತ್ತೇವೆ. ಇದರ ಜೊತೆಗೆ ಕ್ಯಾಂಟಿರಿಂಗ್‌ಗಳಲ್ಲಿಯೂ ಟೆಸ್ಟ್ ಮಾಡಿಸುತ್ತೇವೆ. ಬೆಂಗಳೂರು ಕೇಂದ್ರದಲ್ಲಿ ದಾಳಿ ಆಗ್ತಿದೆ. ಜಿಲ್ಲಾ ಕೇಂದ್ರದಲ್ಲಿಯೂ ಕೂಡ ಎಚ್ಚೆತ್ತುಕೊಳ್ಳಬೇಕು. ಯಾವುದೇ ಕಾರಣಕ್ಕೂ ತಪಾಸಣೆ ಮಾಡದೇ ಇರಲ್ಲ. ಬರುವಂತಹ ಜನರಿಗೆ ಗುಣಮಟ್ಟದ ಆಹಾರ ಕೊಡಬೇಕು. ಕೊಟ್ಟ ದುಡ್ಡಿಗೆ ಜನರಿಗೆ ಮೋಸ ಮಾಡಬಾರದು. ನಿಯಮ ಉಲ್ಲಂಘನೆಗೆ ತಕ್ಕಂತೆ ಕ್ರಮ ವಹಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ