ಡೆಹ್ರಾಡೂನ್: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ ಬೆನ್ನಲ್ಲೇ ಇದೀಗ ಬದರಿನಾಥ ಧಾಮದಲ್ಲೂ ಕಾಣಿಕೆ ದುರುಪಯೋಗವಾಗಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿದ್ದು, ತನಿಖೆಗೆ ಆದೇಶಿಸಲಾಗಿದೆ.
ಬದರಿನಾಥ-ಕೇದರನಾಥ ದೇವಸ್ಥಾನ ಸಮಿತಿ ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದೇಣಿಗೆ ದುರುಪಯೋಗದ ಆರೋಪಗಳನ್ನು ದೇವಸ್ಥಾನ ಸಮಿತಿಯು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಮಗ್ರ ತನಿಖೆಗಾಗಿ ತನಿಖಾ ಸಮಿತಿಯೊಂದನ್ನು ರಚಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಈ ಆರೋಪಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಸಂಬಂಧಪಟ್ಟ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Laxmi News 24×7