Breaking News

ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನ

Spread the love

 ಬೆಳಗಾವಿ: 2026-27 ನೇ ಸಾಲಿನಲ್ಲಿ ಹೈಟೆಕ್ ಹಾರ್ವೆಸ್ಟರ್ ಹಟ್ಗಳನ್ನು ಅನುಷ್ಠಾನ ಮಾಡಲು ಚಾಲ್ತಿಯಲ್ಲಿರುವ ನೋಂದಾಯಿತ ಸಂಘ-ಸಂಸ್ಥೆಗಳು (FPO ಗಳನ್ನೊಳಗೊಂಡಂತೆ)/ಯಂತ್ರ ಧಾರೆ ಕೇಂದ್ರಗಳು/ ವೈಯಕ್ತಿಕ ಫಲಾನುಭವಿಗಳಿಗೆ ಸಹಾಯಧನವನ್ನು ನೀಡಲು అభి ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಷ್ಟ 31, 2026 ಕೊನೆಯ ದಿನವಾಗಿರುತ್ತದೆ, ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಪ.ಜಾ/ಪ.ಪಂ. ವರ್ಗದ ರೈತರಿಗೆ ಗರಿಷ್ಠ ಶೇ.70 ರಂತೆ ಹಾಗೂ ಸಂಘ-ಸಂಸ್ಥೆಗಳಿಗೆ ಗರಿಷ್ಠ ಶೇ.70 ರಂತೆ ಸಹಾಯಧನವನ್ನು ನೀಡಲಾಗುವುದು.

ಬೆಳಗಾವಿ ಜಿಲ್ಲೆಗೆ 13 ಶುಗರ್ಕೇನ್ ಹಾರ್ವೆಸ್ಟರ್ ಹಬ್ ಕಾರ್ಯಕ್ರಮವಿದ್ದು 12 ವೈಯಕ್ತಿಕ ಫಲಾನುಭವಿಗಳಿಗೆ (10 ಸಾಮಾನ್ಯ/ 01 ಪ.ಜಾತಿ/01 ಪ.ಪಂಗಡ) ಹಾಗೂ ಒಂದು (1) ಸಂಘ-ಸಂಸ್ಥೆಗಳಿಗೆ ಇರುತ್ತದೆ. ಅದೇತೆರನಾಗಿ ಒಂದು (1) ಕಂಬೈನ್ಸ್ ಹಾರ್ವೆಸ್ಟರ್ ಹಬ್ (ಸಾಮಾನ್ಯ-ವೈಯಕ್ತಿಕ) ಕೇಂದ್ರ ಕಛೇರಿಯಿಂದ ಕಾರ್ಯಕ್ರಮವಿದ್ದು, ಜಿಲ್ಲಾ ಮಟ್ಟದ ಉಪಕರಣ ಸಮಿತಿ ಸಭೆಯಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಬೆಳಗಾವಿ ಅವರ ಅಧ್ಯಕ್ಷತೆಯಲ್ಲಿ ನಿಯಮಾನುಸಾರ ಹೈಟೆಕ್ ಹಾರ್ವೆಸ್ಟರ್ ಹಟ್ಗಳನ್ನು ನಿರ್ವಹಿಸಲು ಸಂಸ್ಥೆ/ ವೈಯಕ್ತಿಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಜಿಲ್ಲೆಗೆ ಹೆಚ್ಚುವರಿ ಗುರಿ ನೀಡಿದ್ದಲ್ಲಿ ಇದೇ ಅರ್ಜಿಗಳನ್ನು ಪರಿಗಣಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಯೋಜನೆಯಡಿ ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬೇಕು, ಕಳೆದ ಸಾಲಿನ ಅರ್ಜಿಗಳನ್ನು ಈ ಸಾಲಿಗೆ ಪರಿಗಣಿಸಲಾಗುವುದಿಲ್ಲ.

ಅರ್ಜಿದಾರರು ಇಚ್ಛಿಸುವ ಹಲ್ಲೆ ಅರ್ಜಿ ಜೊತೆ, ನೊಂದಾಯಿಸಿದ ಸಂಸ್ಥೆ ಪ್ರಮಾಣ ಪತ್ರ, ಪಹಣಿ, ಜಾತಿಪ್ರಮಾಣ ಪತ್ರ, ಗುರುತಿನಪತ್ರ, ಬ್ಯಾಂಕಾ ಖಾತೆ ಸಂಖ್ಯೆ, ರೂ.20/-ಗಳ ಛಾಪಾ ಕಾಗದದ ಮೇಲೆ ಹಬ್ ಅನ್ನು ಪರಭಾರೆ ಮಾಡುವುದಿಲ್ಲವೆಂದು ಮುಚ್ಚಳಿಕೆ ಪತ್ರ, 2 ವರ್ಷಗಳ ಲೆಕ್ಕ ಪರಿಶೋಧನಾ ಪತ್ರ, ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಕಟಾವಿಗೆ ಮಾಡಿಕೊಂಡ ಲಿಖಿತ ಒಪ್ಪಂದ ಪ್ರಮಾಣ ಪತ್ರ ಹಾಗೂ ಸಹಾಯಧನವು Credit Linked Back ended subsidy ಆಗಿರುವುದರಿಂದ ಸಂಬಂಧಿಸಿದ ಬ್ಯಾಂಕ್ನಿಂದ “ತಾತ್ವಿಕ ಸಾಲ ಮಂಜೂರಾತಿ ಪತ್ರ”ವನ್ನು ಸಂಬಂಧಿಸಿದ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸುವುದು. ಕೃಷಿ ಯಂತ್ರಧಾರೆ ಕೇಂದ್ರಗಳ/ ಸಹಕಾರಿ ಸಂಘಗಳ ನಿಬಂಧನೆಯಂತೆ /ಕಂಪನಿ ಕಾಯ್ದೆಯಡಿ ನೋಂದಾಯಿಸಿದ ಸಂಘ-ಸಂಸ್ಥೆಗಳು ಮಾತ್ರ ಅರ್ಹತೆಯನ್ನು ಹೊಂದಿರುತ್ತವೆ.

ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಬೆಳಗಾವಿ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Spread the love

About Laxminews 24x7

Check Also

ಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ.ಬಿ.ಪಾಟೀಲ್‌

Spread the loveವಿಜಯಪುರ: ವಿಜಯಪುರ ವಿಮಾನ ನಿಲ್ದಾಣದ ಕಾರ್ಯಾರಂಭಕ್ಕೆ ಇದ್ದ ಪ್ರಮುಖ ಅಡೆತಡೆ ದೂರವಾಗಿದ್ದು, ಪರಿಸರ ಸಂಬಂಧಿತ ಅನುಮತಿ ಸಿಕ್ಕರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ