Breaking News

ಸೆ.6ಕ್ಕೆ ಬೆಂಗಳೂರಲ್ಲಿ ಅಹಿಂದ ಸಮಾವೇಶ; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬಳಿಕ ನಡೆಯುತ್ತಿರೋ ಸಮಾವೇಶ

Spread the love

ಬೆಂಗಳೂರು: ಸೆಪ್ಟೆಂಬರ್ 6ರಂದು ಬೆಂಗಳೂರಲ್ಲಿ ಅಹಿಂದ ಸಮಾವೇಶ ನಡೆಯಲಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ  ಭಾಗಿಯಾಗಲಿದ್ದಾರೆ.

ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಈ ಸಮಾವೇಶ ಆಯೋಜಿಸಲಾಗಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟ ಬಳಿಕ ನಡೆಯುತ್ತಿರುವ ಸಮಾವೇಶ ಇದಾಗಿದ್ದು, ಕಾಂಗ್ರೆಸ್‌ನ ಅಹಿಂದ ನಾಯಕರಿಗೂ ಸಮಾವೇಶಕ್ಕೆ ಆಹ್ವಾನ ನೀಡಲಾಗಿದೆ. ಈ ಮಧ್ಯೆ ಕೆಲ ನಾಯಕರಿಗೆ ಸಮಾವೇಶಕ್ಕೆ ಹೋಗ್ಬೇಕಾ..? ಬೇಡ್ವಾ..? ಎಂಬ ಗೊಂದಲ ಕೂಡ ಎದುರಾಗಿದೆ.

ಇನ್ನು ಸಮಾವೇಶದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜಾತಿಗಣತಿ, ಒಳಮೀಸಲಾತಿ ವಿಚಾರಗಳ ಬಗ್ಗೆಯೂ ಅಹಿಂದ ಸಮಾವೇಶದಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ.

ಸೆಪ್ಟೆಂಬರ್ 6 ನಡೆಯಲಿರುವ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರ ಸಂದೇಶವೇನು? ಏಕಕಾಲಕ್ಕೆ ಪಕ್ಷ ಮತ್ತು ಸರ್ಕಾರ ಅಚ್ಚರಿಯಾಗುವ ರೀತಿಯಲ್ಲಿ ನಿರ್ಧಾರವನ್ನೇನಾದರೂ ತೆಗೆದುಕೊಳ್ಳಲಿದ್ದಾರಾ? ಎಂಬ ಕುತೂಹಲ ಮೂಡಿದೆ. ಅಷ್ಟೇ ಅಲ್ಲ ಈ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ಸಮಾವೇಶಕ್ಕೆ ಹಾಜರಾಗುತ್ತಾರಾ ಎಂಬುದರ ಮೇಲೂ ಎಲ್ಲರ ಕಣ್ಣು ನೆಟ್ಟಿದೆ.


Spread the love

About Laxminews 24x7

Check Also

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ – ವಿದ್ಯಾರ್ಥಿಗಳ ಮೇಲಿದ್ದ ಎಲ್ಲಾ ಎಫ್‌ಐಆರ್ ರದ್ದು

Spread the loveನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಶೈಕ್ಷಣಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕಾಕ್ರೋಚ್ ಜನತಾ ಪಾರ್ಟಿ  ನೇತೃತ್ವದಲ್ಲಿ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ