Breaking News

ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ – ಜಮೀರ್‌ ಸವಾಲು

Spread the love

ಬೆಂಗಳೂರು: ರಾಜ್ಯದ ಕೆಲವು ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿರುವ ನನ್ನ ಕುರಿತ ಆಡಿಯೋ ನಕಲಿ, ಎಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಕಾಂಗ್ರೆಸ್‌  ನಾಯಕ ಜಮೀರ್ ಅಹಮದ್ ಖಾನ್  ತಿಳಿಸಿದ್ದಾರೆ.

ವೈರಲ್‌ ಆಗುತ್ತಿರುವ ಆಡಿಯೋ ಬಗ್ಗೆ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಹೇಳಿಯಲ್ಲಿ, ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ನಾನು ಆ ರೀತಿ ಮಾತನಾಡಿಲ್ಲ. ಗೊಂದಲ ಉಂಟು ಮಾಡಲು ಇದೆಲ್ಲವೂ ಸೃಷ್ಟಿ ಮಾಡಲಾಗಿದೆ. ಇದು ಕಿಡಿಗೇಡಿಗಳ ಕೃತ್ಯ, ಇದನ್ನು ಯಾರೂ ನಂಬಬಾರದು. ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ ಒಳಪಡಿಸಲಿ ಎಂದು ಸವಾಲು ಹಾಕಿದ್ದಾರೆ.


Spread the love

About Laxminews 24x7

Check Also

ರಾಧಾಕೃಷ್ಣ ನೀರು ಸರಬರಾಜು ಯೋಜನೆ ವಿರೋಧಿಸಿ ಪ್ರತಿಭಟನೆ

Spread the loveಚಿಕ್ಕೋಡಿ ತಾಲೂಕಿನ ಕಲ್ಲೋಳಿ ಗ್ರಾಮದ ಸಮೀಪ ರಾಧಾಕೃಷ್ಣ ನೀರು ಸರಬರಾಜು ಯೋಜನೆಯನ್ನು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರವು ಸದ್ದಿಲ್ಲದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ