Breaking News

ಪೊಲೀಸ್ ನೇಮಕಾತಿ ಪರೀಕ್ಷೆಗೆ ಎಐ ಕಣ್ಗಾವಲು

Spread the love

ಬೆಳಗಾವಿ:ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಸಿವಿಲ್ ಪೊಲೀಸ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಯ ಪರೀಕ್ಷೆಗಳು ಆಗಸ್ಟ 2 ರಂದು ನಡೆಯಲಿದ್ದು, ನಿಯೋಜಿತ ಸಿಬ್ಬಂದಿ ಪರೀಕ್ಷಾ ಸಮಯದಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಪರೀಕ್ಷಾ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಬುಧವಾರ  ನಡೆದ ಪೊಲೀಸ್ ಹುದ್ದೆಗಳ ನೇಮಕಾತಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ಮಾತನಾಡಿ, ದೂರದಿಂದ ಬರುವಂತಹ ಅಭ್ಯರ್ಥಿಗಳಿಗೆ ಸುಗಮ ಸಂಚಾರ ಒದಗಿಸುವ ನಿಟ್ಟಿನಲ್ಲಿ ಸಾರಿಗೆ ಸೌಲಭ್ಯ ಹೆಚ್ಚಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಗಳು ಕ್ಯಾಮರಾ ಕಣ್ಗಾವಲಿನಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು ಎಂದರು.
ನಗರ ಪೊಲೀಸ ಆಯುಕ್ತ ಭೂಷಣ ಬೊರಸೆ ಮಾತನಾಡಿ, ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಕ್ಯಾಮರಾ ಇರುವುದು ಅಗತ್ಯವಾಗಿದೆ. ಅಕ್ರಮ ನಡೆಯುವಂತಹ ವಸ್ತುಸ್ಥಿತಿಯನ್ನು ಕಂಡು ಇಡಿಯುವಂತಹ ಎ.ಐ ಕ್ಯಾಮರಾ ಅಳವಡಿಸಬೇಕು. ನಿರ್ಲಕ್ಷೃ ವಹಿಸಿದರೆ ಕಠಿಣ ಕ್ರಮ ಕೈಗೊಳ್ಳಲಾವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ ಮಾತನಾಡಿ, ಈ ಹಿಂದೆ ಯಾವುದೇ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾದ ನಿಯೋಜಿತ ಸಿಬ್ಬಂದಿಗಳನ್ನು ಪರೀಕ್ಷಾ ಕರ್ತವ್ಯಕ್ಕೆ ಮತ್ತೆ ನಿಯೋಜಿಸಬಾರದು. ಪರೀಕ್ಷಾ ಭದ್ರತೆ ವಿಷಯದಲ್ಲಿ ಯಾರು ಮಧ್ಯಪ್ರವೇಶಿಸಬಾರದು ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎಂ ಕಾಂಬಳೆ ಮಾತನಾಡಿ,ಬೆಳಗಾವಿಯಲ್ಲಿ 46 ಕೇಂದ್ರಗಳು ಹಾಗೂ ಚಿಕ್ಕೋಡಿಯಲ್ಲಿ 15 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 25164 ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಿಯೋಜಿತ ಮುಖ್ಯ ಅಧೀಕ್ಷಕರು 2 ಗಂಟೆ ಮುಂಚಿತವಾಗಿಯೇ ಹಾಜರಿರಬೇಕು.
ನಿಯೋಜಿತ ಸಿಬ್ಬಂದಿಗಳಿಗೆ ಪರೀಕ್ಷೆ ಕೇಂದ್ರಗಳಲ್ಲಿ ಮೊಬೈಲ್ ಬಳಕೆಗೆ ಅವಕಾಶವಿರುವುದಿಲ್ಲ. ಬೆಗ್ಗೆ 7.30 ಗಂಟೆಗೆ ಪ್ರಶ್ನೆ ಪತ್ರಿಕೆಗಳನ್ನು ಕಳಿಸಲಾಗುತ್ತದೆ. ಪರೀಕ್ಷಾ ಕೇಂದ್ರದಲ್ಲಿನ ಅಧಿಕಾರಿಗಳು ಅವುಗಳನ್ನು ಸರಿಯಾಗಿ ಪರಿಶೀಲಿಸಿ ಪಡೆದುಕೊಳ್ಳಬೇಕು. ಪರೀಕ್ಷೆ ಪ್ರಕ್ರಿಯೆ ಸಂಪೂರ್ಣವಾಗಿ ಕ್ಯಾಮರಾಗಳ ಕಣ್ಗಾವಿಲನಲ್ಲಿ ನಡೆಯುವುದು ಕಡ್ಡಾಯ.ಪರೀಕ್ಷಾ ಕೇಂದ್ರದಲ್ಲಿನ 24 ಜನ ಅಭ್ಯರ್ಥಿಗಳಿಗೆ ಒಬ್ಬರು ಮೇಲ್ವಿಚಾರಕರ ನಿಯೋಜಿಸಲಾಗುವುದು. ಪ್ರಶ್ನೆ ಪತ್ರಿಕೆ ಮತ್ತು ಓ.ಎಂ.ಆರ್ ಸೀಟ್ ನಂಬರ್ ಒಂದೇ ಇರುವುದಾಗಿ ಪರೀಕ್ಷಿಸಿ ವಿತರಿಸಬೇಕು ಎಂದರು.
ಚಿಕ್ಕೋಡಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಲಿಂಗರಾಜ ಇತರರಿದ್ದರು.

Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ