ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರನ್ನು ಇಂದು ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ಹಾಗೂ ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ರವರ ನೇತೃತ್ವದಲ್ಲಿ ಸಮುದಾಯದ ಶಾಸಕರು ಮಾಜಿ ಸಚಿವರು ಹಾಗೂ ಮಾಜಿ ಸಂಸದರು ಭೇಟಿ ಮಾಡಿ, ನೇಮಕಾತಿಯಲ್ಲಿ ಒಳ ಮೀಸಲಾತಿ ಅನುಷ್ಠಾನ ಮಾಡುವ ಕುರಿತು ಚರ್ಚಿಸಿದರು.
ಒಮ್ಮತದ ಅಭಿಪ್ರಾಯದ ಮೂಲಕ (Amikebal setelment) ಮೀಸಲಾತಿ ಹಂಚಿಕೆ ಮಾಡಿಕೊಳ್ಳಲು ಅಧ್ಯಕ್ಷರು ಸಚಿವರಿಗೆ ತಿಳಿಸಿದರು ಪರಿಶಿಷ್ಟ ಜಾತಿಯ ನೂರೊಂದು ಸಮುಯದಾಯಗಳಿಗೂ ನ್ಯಾಯಯುತವಾಗಿ ಹಂಚಿಕೆ ಮಾಡಿಕೊಳ್ಳಲು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಆರ್.ಬಿ.ತಿಮ್ಮಾಪುರ,ಮಾಜಿ ಸಚಿವ ಹೆಚ್. ಆಂಜನೇಯ, ಚಂದ್ರಪ್ಪ ಎಲ್.ಹನುಮಂತಯ್ಯ, ಶಾಸಕರಾದ ಶ್ರೀನಿವಾಸ್, ಧರ್ಮಸೇನ್, ಹಾಗೂ ಅಧ್ಯಕ್ಷರಾದ ಮಂಜುನಾಥ್ ಉಪಸ್ಥಿತರಿದ್ದರು.
Laxmi News 24×7