Breaking News

ಅಕ್ರಮ ಬಾಂಗ್ಲಾ ವಲಸಿಗರೆಂಬ ಶಂಕೆ; 20ಕ್ಕೂ ಹೆಚ್ಚು ಕಾರ್ಮಿಕರ ತಪಾಸಣೆ ನಡೆಸಿದ ಬೆಳಗಾವಿ ಪೊಲೀಸರು

Spread the love

ಬೆಳಗಾವಿ: ನಗರದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಇದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ.

ಕೇಂದ್ರ ಬಸ್ ನಿಲ್ದಾಣದಿಂದ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು, ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. “ಹುಬ್ಬಳ್ಳಿಯಲ್ಲಿ ಕೆಲವರ ತಪಾಸಣೆಯಾಗಿದ್ದು, ಮೂರು ಬಸ್‌ಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಬೆಳಗಾವಿ ನಗರಕ್ಕೆ ಬಂದಿದ್ದಾರೆ” ಎಂದು ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್ ನೇತೃತ್ವದ ತಂಡವು ಅನುಮಾನ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಹೈ ಅಲರ್ಟ್ ಆದ ಡಿಸಿಪಿ ನಾರಾಯಣ ಭರಮನಿ ನೇತೃತ್ವದ ಪೊಲೀಸ್ ತಂಡವು ತಕ್ಷಣವೇ ಎಲ್ಲರನ್ನೂ ಠಾಣೆಗೆ ಕರೆತಂದು ತನಿಖೆ ಆರಂಭಿಸಿತು.

ಕಾರ್ಮಿಕರ ಸ್ಪಷ್ಟನೆ: ವಿಚಾರಣೆ ವೇಳೆ ವಶಕ್ಕೆ ಒಳಗಾದವರು, “ನಾವು ಬಾಂಗ್ಲಾದೇಶದವರಲ್ಲ, ಪಶ್ಚಿಮ ಬಂಗಾಳ ಮೂಲದವರು. ಶಹಾಪುರದಲ್ಲಿ ಅಕ್ಕಸಾಲಿಗರಾಗಿ ಕೆಲಸ ಮಾಡುತ್ತಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಮತದಾನ ಇದ್ದಿದ್ದರಿಂದ ಊರಿಗೆ ಹೋಗಿದ್ದೆವು, ಈಗ ವಾಪಸ್ ಕೆಲಸಕ್ಕೆ ಬಂದಿದ್ದೇವೆ” ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

ದಾಖಲೆಗಳ ಪರಿಶೀಲನೆ: ಡಿಸಿಪಿ ನಾರಾಯಣ ಭರಮನಿ ಅವರ ನೇತೃತ್ವದಲ್ಲಿ ಅಧಿಕಾರಿಗಳು ಕಾರ್ಮಿಕರ ಮೊಬೈಲ್ ಸಂಖ್ಯೆಗಳು, ಆಧಾರ್ ಕಾರ್ಡ್‌ಗಳು ಮತ್ತು ವೋಟರ್ ಐಡಿಗಳನ್ನು ಕೂಲಂಕಷವಾಗಿ ತಪಾಸಣೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇವೆಲ್ಲವೂ ಅಸಲಿ ದಾಖಲೆಗಳೆಂದು ಕಂಡುಬಂದ ಹಿನ್ನೆಲೆಯಲ್ಲಿ, ಹೆಚ್ಚಿನ ಸುರಕ್ಷತೆಗಾಗಿ ಎಲ್ಲರ ಹೆಬ್ಬೆರಳ ಗುರುತುಗಳನ್ನು ಪಡೆದುಕೊಳ್ಳಲಾಗಿದೆ. ಯಾವುದೇ ಅಧಿಕೃತ ತಾಂತ್ರಿಕ ದೋಷ ಕಂಡು ಬರದ ಕಾರಣ, ವಿಚಾರಣೆಯ ನಂತರ ಆ ಎಲ್ಲಾ ಕಾರ್ಮಿಕರನ್ನು ಅವರವರ ನಿವಾಸ ಹಾಗೂ ಕೆಲಸದ ಸ್ಥಳಗಳಿಗೆ ವಾಪಸ್ ಕಳುಹಿಸಿಕೊಡಲಾಗಿದೆ. ಆದರೆ, ದಾಖಲೆಗಳು ನಕಲಿಯೇ ಎಂಬ ಬಗ್ಗೆ ಆಂತರಿಕ ಪರಿಶೀಲನೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಳ – ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಮುನಿಯಪ್ಪ

Spread the loveಬೆಂಗಳೂರು: ಬಿಪಿಎಲ್  ಕಾರ್ಡ್‌ಗೆ ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯನ್ನು 3 ಲಕ್ಷ ರೂ.ವರೆಗೆ ಹೆಚ್ಚಿಸುವ ಬಗ್ಗೆ ಸರ್ಕಾರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ