Breaking News

ತಾಯಿ ಮತ್ತು ಮೂರು ಮಕ್ಕಳು ಸಾವು

Spread the love

ಬೆಳಗಾವಿ ಮೂಲದ ಮೂರು ಹೆಣ್ಣು ಮಕ್ಕಳು ಹಾಗೂ ತಾಯಿಯ ಶವ ಮಹಾರಾಷ್ಟ್ರದ ಜತ್ತ ತಾಲೂಕಿನ ಬಿಳ್ಳೂರು ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ.

 

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ನಿವಾಸಿ ಆಗಿರುವ ಸುನಿತಾ ತುಕಾರಾಮ್ ಮಾಳಿ ಮತ್ತು ಪುತ್ರಿಯರಾದ ಅಮೃತಾ, ಅಂಕಿತಾ ಹಾಗೂ ಐಶ್ವರ್ಯಾ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದೆ.

ಕಳೆದ ಭಾನುವಾರ ಮುಂಜಾನೆ ಮನೆ ಬಿಟ್ಟು ಹೋಗಿದ್ದ ಮಹಿಳೆ ಮತ್ತು ಮೂವರು ಪುಟ್ಟ ಹೆಣ್ಮಕ್ಕಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

 

ಸುನಿತಾ ಅವರನ್ನು ಮಹಾರಾಷ್ಟ್ರದ ಬಿಳ್ಳೂರು ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿದ್ದು, ಅವರಿಗೆ ಮೂವರೂ ಹೆಣ್ಮಕ್ಕಳಿದ್ದಾರೆ. ಅಲ್ಲಿ ಸಂಸಾರ ಹೇಗೆ ನಡೆಯುತ್ತಿತ್ತು ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ನಾಪತ್ತೆಯಾಗಿದ್ದ ಇವರು ಶವವಾಗಿ ಪತ್ತೆಯಾಗಿರುವುದರಿಂದ ಕೌಟುಂಬಿಕ ಸಮಸ್ಯೆ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ.

 

ಸುನೀತಾ ಹಾಗೂ ಮಕ್ಕಳು ಕಳೆದ ಭಾನುವಾರ ಮುಂಜಾನೆ ನಾಪತ್ತೆಯಾಗಿದ್ದರು. ಮನೆಯವರು ಹುಡುಕಾಟಕ್ಕೆ ಆರಂಭ ಮಾಡಿದಾಗ ಸಂಜೆಯ ಹೊತ್ತಿಗೆ ಬಿಳ್ಳೂರು ಗ್ರಾಮದಲ್ಲಿ ಶವವಾಗಿ ಪತ್ತೆಯಾದರು. ಪ್ರಕರಣವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಮಹಾರಾಷ್ಟ್ರದ ಜತ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೋಟ ಮೂಲಕ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ‌ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

Spread the love ಬೋಟ ಮೂಲಕ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ‌ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ