Breaking News

ರಾಜ್ಯದಲ್ಲಿ ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ, ಮೋದಿಯವರಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ: ಡಿಕೆಶಿ

Spread the love

ರಾಯಚೂರು: ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ. ಪ್ರಧಾನಿ ಮೋದಿಯವರ ಕಣ್ಣಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್  ಅವರು ಹೇಳಿದರು‌.

ಲಿಂಗಸಗೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಕರ್ನಾಟಕದಲ್ಲಿ ಸಿಎಂ ಕುರ್ಚಿ ಅಲುಗಾಡುತ್ತಿದೆ. ಕೇರಳ, ಪಂಜಾಬ್‌ನಲ್ಲೂ ಇದೇ ರೀತಿ ಆಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ ಎಂದರು.

ಡಿ.ಸುಧಾಕರ್ ಅವರ ನಿಧನದ ಬಗ್ಗೆ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆ ಉದ್ಘಾಟನೆಗೆ ಅವರು ನಮ್ಮೊಡನೆ ಇರಬೇಕಿತ್ತು. ಅವರ ಅನಾರೋಗ್ಯದ ಕಾರಣಕ್ಕೆ ಇದು ಸಾಧ್ಯವಾಗಲಿಲ್ಲ. ನನ್ನನ್ನ,‌ ಮುಖ್ಯಮಂತ್ರಿ ಅವರನ್ನ ಭೇಟಿ ಮಾಡಿದಾಗಲೆಲ್ಲ ಸದಾ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತಾಗಿ ಮನವಿ ಮಾಡುತ್ತಲೇ ಇದ್ದರು. ಅವರು ಜೈನ ಸಮುದಾಯಕ್ಕೆ ಸೇರಿದವರು. ಕಡಿಮೆ ಜನಸಂಖ್ಯೆ ಇದ್ದರು ಸಹ ಎಲ್ಲಾ ಸಮುದಾಯದ ಜನರನ್ನ ಪ್ರೀತಿಯಿಂದ ಕಾಣುತ್ತಿದ್ದರು. ಹೃದಯ ಶ್ರೀಮಂತಿಕೆ ಇದ್ದಂತಹ ಮನುಷ್ಯ. ಇವರ ಸಾವಿನಿಂದ ನಮ್ಮ ಸರ್ಕಾರಕ್ಕೆ, ಕ್ಷೇತ್ರಕ್ಕೆ ನಷ್ಟ ಉಂಟಾಗಿದೆ. ನನಗೆ ವೈಯಕ್ತಿಕವಾಗಿ ಬಹಳ ಆಘಾತವಾಗಿದೆ ಎಂದರು.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ