Breaking News

ಸ್ಯಾಂಡಲ್‌ವುಡ್‌ ನಟಿಯ ಸಹೋದರಿಗೆ ವ್ಯಕ್ತಿಯೊಬ್ಬನಿಂದ ಅತ್ಯಾಚಾರ ಆರೋಪ – ಆರೋಪಿ ಬಂಧನ

Spread the love

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿಯ ಸಹೋದರಿಯೊಬ್ಬರು ಅತ್ಯಾಚಾರ ಆರೋಪದ ಅಡಿ ನೀಡಿದ ದೂರಿನ ಆಧಾರದ ಮೇಲೆ ಚಂದ್ರಾಲೇಔಟ್‌ ಠಾಣೆ ಪೊಲೀಸರು  ವ್ಯಕ್ತಿಯೊಬ್ಬನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

ರಾಘವೇಂದ್ರ ಬಂಧಿತ ಆರೋಪಿ. ದೂರುದಾರ ಯುವತಿ ಹಾಗೂ ಆರೋಪಿ ರಾಘವೇಂದ್ರ ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು, ಸ್ನೇಹ ಪ್ರೀತಿಗೆ ತಿರುಗಿತ್ತು. ಬಳಿಕ ಮದುವೆಯಾಗುವುದಾಗಿ ನಂಬಿಸಿ ರಾಘವೇಂದ್ರ ತನ್ನ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.

ಇದೇ ವೇಳೆ, ರಾಘವೇಂದ್ರ ತನ್ನ ಕ್ರೆಡಿಟ್‌ ಕಾರ್ಡ್‌ ಬಳಸಿ ಸಾಲ ಪಡೆದಿದ್ದಾನೆ, ಇದರಿಂದ ಆಕೆಗೆ ಸಮಸ್ಯೆಯಾಗಿದ್ದು ಇಬ್ಬರ ನಡುವೆ ಜಗಳ ನಡೆದಿತ್ತು. ಬಳಿಕ ವಿಚಾರಿಸಿದಾಗ ರಾಘವೇಂದ್ರಗೆ ಈಗಾಗಲೇ ಮದುವೆಯಾಗಿರುವುದು ತಿಳಿದುಬಂದಿತ್ತು ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಖಾಸಗಿ ಫೋಟೊ ತೋರಿಸಿ ಬೆದರಿಕೆ ಆರೋಪ
ರಾಘವೇಂದ್ರನನ್ನ ಮದುವೆ ವಿಚಾರವಾಗಿ ಪ್ರಶ್ನಿಸಿದಾಗ, ನಟಿಯ ಸಹೋದರಿಯ ಖಾಸಗಿ ಫೋಟೊಗಳನ್ನ ತೋರಿಸಿ ಬೆದರಿಕೆ ಹಾಕಿದ್ದಾನೆ. ತನ್ನ ಮಾತು ಕೇಳದಿದ್ದರೆ ಫೋಟೊಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಹಿಂದೆಯೂ ಚಂದ್ರಾಲೇಔಟ್‌ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು. ಪೊಲೀಸರು ರಾಘವೇಂದ್ರನನ್ನ ಠಾಣೆಗೆ ಕರೆಸಿ ಖಾಸಗಿ ಫೋಟೊಗಳನ್ನ ಡಿಲೀಟ್‌ ಮಾಡಿಸಿ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಆದರೆ ಕೆಲ ದಿನಗಳ ಬಳಿಕ ಕೈ ಕೊಯ್ದುಕೊಂಡಿರುವ ಫೋಟೊ ಹಾಗೂ ಖಾಸಗಿ ಫೋಟೊಗಳನ್ನು ರಾಘವೇಂದ್ರ ಯುವತಿಗೆ ಕಳುಹಿಸಿದ್ದಾನೆ. ಅಲ್ಲದೇ, ತಾನು ಹೇಳಿದ ಸ್ಥಳಕ್ಕೆ ಬರುವಂತೆ ಬೆದರಿಕೆ ಹಾಕಿದ್ದಾನೆ.

ನಟಿಯ ಸಹೋದರಿ ವಿರುದ್ಧವೂ ರಾಘವೇಂದ್ರ ದೂರು
ಇದರ ನಡುವೆ ರಾಘವೇಂದ್ರ ಕೂಡ ನಟಿಯ ಸಹೋದರಿ ವಿರುದ್ಧ ತಲಘಟ್ಟಪುರ ಪೊಲೀಸ್‌ ಠಾಣೆಯಲ್ಲಿ ಪ್ರತಿ ದೂರು ನೀಡಿದ್ದಾನೆ. ರಾಘವೇಂದ್ರ ಹಾಗೂ ಆತನ ತಾಯಿಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ತಲಘಟ್ಟಪುರ ಪೊಲೀಸರು ಎನ್‌ಸಿಆರ್‌ ದಾಖಲಿಸಿ ನೋಟಿಸ್‌ ನೀಡಿದ್ದರು. ಆದರೆ ವಿಚಾರಣೆಗೆ ನಟಿಯ ಸಹೋದರಿ ಹಾಜರಾಗಿಲ್ಲ. ಪ್ರಕರಣದ ಎರಡೂ ದೂರುಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ