Breaking News

ಪ್ರೀತಿ ವಿಚಾರದಲ್ಲಿ ಗಲಾಟೆ – ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚಾಕು ಇರಿತ

Spread the love

ಮಂಗಳೂರು: ಕಾಲೇಜಿಗೆ ತೆರಳಲು ಬಸ್ಸಿಗೆ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ  ಯುವಕನೊಬ್ಬ ಚಾಕು ಇರಿದ ಪ್ರಕರಣ ಬಂಟ್ವಾಳ ತಾಲೂಕಿನ ಇರಾದಲ್ಲಿ ನಡೆದಿದೆ.

ಬಂಟ್ವಾಳದ ಮೊಂತಿಮಾರ್ ಪಡ್ಪುವಿನ ವ್ಯಾಪಾರಿ ಜವ್ವರ್ (28) ಚಾಕು ಇರಿದ ಆರೋಪಿ. ಪ್ರೀತಿ ವಿಚಾರದಲ್ಲಿ ಇಬ್ಬರ ನಡುವೆ ಆದ ಗಲಾಟೆಯೇ ಚಾಕು ಇರಿತಕ್ಕೆ ಕಾರಣ ಎನ್ನಲಾಗಿದೆ. ಚಾಕು ಇರಿದು ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.

ಚಾಕು ಇರಿತದಿಂದ ಯುವತಿಯ ಕೈಗೆ ಗಾಯವಾಗಿದೆ. ತೀವ್ರ ರಕ್ತ ಸ್ರಾವವಾಗಿ ಬಸ್ ನಿಲ್ದಾಣದ ತುಂಬಾ ರಕ್ತ ಚೆಲ್ಲಿದೆ. ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಪ್ಯಾಕ್‌ ಮಾಡದ ಖಾದ್ಯ ತೈಲ ಮಾರಾಟಕ್ಕೆ ನಿಷೇಧ – ನಿಯಮ ಉಲ್ಲಂಘಿಸಿದ್ರೆ 7 ವರ್ಷ ಜೈಲು

Spread the loveಮುಂಬೈ: ಮಹಾರಾಷ್ಟ್ರದಲ್ಲಿ ಸಡಿಲ (ಪ್ಯಾಕ್ ಮಾಡದ) ಖಾದ್ಯ ತೈಲ ಮಾರಾಟ ಮಾಡುವುದನ್ನು ರಾಜ್ಯ ಆಹಾರ ಮತ್ತು ಔಷಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ