Breaking News

ವಿಪಕ್ಷಗಳ ಹೋರಾಟದ ಮಧ್ಯೆ ಸಚಿವ ನಾಗೇಂದ್ರಗೆ ಮತ್ತೊಂದು ಇಲಾಖೆ ಜವಾಬ್ದಾರಿ ಕೊಟ್ಟ ಡಿಕೆ ಸರ್ಕಾರ

Spread the love

ಬೆಂಗಳೂರು: ವಿಧಾನ ಮಂಡಲದ ಅಧಿವೇಶನದಲ್ಲಿ ಸಚಿವ ಬಿ. ನಾಗೇಂದ್ರ  ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳು 5 ದಿನಗಳಿಂದ ಹೋರಾಟ ಮಾಡ್ತಿವೆ. ಇದರ ಮಧ್ಯೆಯೇ ನಾಗೇಂದ್ರ ಅವರಿಗೆ ರಾಜ್ಯ ಸರ್ಕಾರ ಮತ್ತೊಂದು ಇಲಾಖೆ ಜವಾಬ್ದಾರಿ ಕೊಟ್ಟಿದೆ.

ಯೋಜನೆ ಮತ್ತು ಸಾಂಖ್ಯಿಕ ಖಾತೆ ಜೊತೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯದ ಜವಾಬ್ದಾರಿಯನ್ನೂ ನಾಗೇಂದ್ರ ಅವರ ಹೆಗಲಿಗೆ ಸಿಎಂ ಹಾಕಿದ್ದಾರೆ.

ಈ ಇಲಾಖೆ ಸಂಬಂಧ ವಿಧಾನ ಪರಿಷತ್ ನಲ್ಲಿ ಸಚಿವ ನಾಗೇಂದ್ರ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಪ್ರಶ್ನೆಗೆ ಲಿಖಿತ ಮೂಲಕ ಉತ್ತರ ನೀಡಿದ್ದಾರೆ. 2025 ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ ರಚಿಸಲಾಗಿದೆ. ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರೇ ಈ ಸಚಿವಾಲಯದ ಸಚಿವರೂ ಆಗಿರುತ್ತಾರೆ ಎಂದಿದ್ದಾರೆ.

ಒಟ್ಟು 16 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯಕ್ಕೆ ಮೀಸಲಿಟ್ಟಿದೆ ಅಂತ ಉತ್ತರ ನೀಡಿದ್ದಾರೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ