Breaking News

ಕರ್ನಾಟಕ ವಿಧಾನಸಭೆಯ ಉಪಸಭಾಪತಿಯಾಗಿ ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಆಯ್ಕೆ

Spread the love

ಕರ್ನಾಟಕ ವಿಧಾನಸಭೆಯ ಉಪಸಭಾಪತಿಯಾಗಿ ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಆಯ್ಕೆಯಾಗಿದ್ದಾರೆ.

ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ಮಾಮನಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಅವರ ಆಯ್ಕೆ ಖಚಿತವಾಗಿದೆ.

ಮಂಗಳವಾರ ಈ ಕುರಿತು ಅಧಿಕೃತ ಘೋಷಣೆಯಾಗಲಿದ್ದು, ಅಂದೇ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ತಮ್ಮ ತಂದೆಯೂ ಉಪಸಭಾಪತಿಯಾಗಿ ಕೆಲಸ ಮಾಡಿದ್ದರಿಂದ ತಮ್ಮನ್ನೂ ಉಪಸಭಾಪತಿ ಮಾಡಬೇಕೆನ್ನುವ ಬೇಡಿಕೆಯನ್ನು ಮಾಮನಿ ಮುಂದಿಟ್ಟಿದ್ದರು. ಆದರೆ ಅರಗ ಜ್ಞಾನೇಂದ್ರ ಕೂಡ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದರಿಂದ ತೊಡಕಾಗಿತ್ತು.

ಆದರೆ ಇಂದು ಮುಖ್ಯಮಂತ್ರಿಗಳು ಸಭೆ ನಡೆಸಿ ಒಮ್ಮತ ಮೂಡಿಸಿದರು. ಮುಖ್ಯಮಂತ್ರಿಗಳೇ ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿದ್ದಾರೆ.


Spread the love

About Laxminews 24x7

Check Also

belagavi: ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಆದ್ಯತೆ

Spread the loveಸತ್ತಿಗೇರಿ:  ಸವದತ್ತಿ ಯಲ್ಲಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ವಿಶ್ವಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ