Breaking News

ಹಿರಿಯ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ

Spread the love

ನ್ನಡ ಚಿತ್ರರಂಗದ ಹಿರಿಯ ನಟ ಅನಂತ್‌ ನಾಗ್‌  ಅವರಿಗೆ ಭಾರತೀಯ ಸಿನಿಮಾ ಕ್ಷೇತ್ರದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ’  ನೀಡಿ ಗೌರವಿಸಲಾಗಿದೆ.

ಇಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ಅನಂತ್‌ ನಾಗ್‌  ಅವರಿಗೆ 2024ನೇ ಸಾಲಿನ ‘ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು

ಭಾರತೀಯ ಸಿನಿಮಾದ ಪಿತಾಮಹ ದಾದಾಸಾಹೇಬ್‌ ಫಾಲ್ಕೆ ಹೆಸರಿನಲ್ಲಿ ಈ ಪ್ರಶಸ್ತಿ ಸ್ಥಾಪಿಸಲಾಗಿದೆ. ಸಿನಿಮಾ ರಂಗದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.

1948ರ ಸೆ. 4ರಂದು ಅನಂತ್ ನಾಗ್ ಅವರು ಉತ್ತರ ಕನ್ನಡದ ಶಿರಳ್ಳಿ ಎಂಬಲ್ಲಿ ಜನಿಸಿದರು. 1973ರ ‘ಸಂಕಲ್ಪ’ ಚಿತ್ರದ ಮೂಲಕ ಬೆಳ್ಳಿ ತೆರೆಗೆ ಪದಾರ್ಪಣೆ ಮಾಡಿದ ಅನಂತ್ ನಾಗ್, ಆನಂತರದಲ್ಲಿ ಶ್ಯಾಮ್ ಬೆನಗಲ್ ಅವರ ಅಂಕುರ್, ಬಯಲುದಾರಿ, ನಾ ನಿನ್ನ ಬಿಡಲಾರೆ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದರು. ತಮ್ಮ ಆರಂಭಿಕ ಚಿತ್ರ ಜೀವನದಲ್ಲಿ ದೊಡ್ಡ ಯಶಸ್ಸು ಗಳಿಸಿದರು. ಸುಮಾರು 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅನಂತ್‌ ನಾಗ್‌, ಯಾವುದೇ ಪಾತ್ರ ಕೊಟ್ಟರೂ ಲೀಲಾಜಾಲವಾಗಿ ಅಭಿನಯಿಸಬಲ್ಲ ಕಲಾವಿದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದೇ ವೇಳೆ ಸುಮಂತ್ ಭಟ್ ಮಿಥ್ಯ ಚಿತ್ರಕ್ಕೆ ರಜತ ಕಮಲ ಪ್ರಶಸ್ತಿ ಸ್ವೀಕರಿಸಿದರು. ಇಂಬು ತುಳು ಸಿನಿಮಾ ತಂಡಕ್ಕೂ ಪ್ರಶಸ್ತಿ ಪ್ರದಾನ ಮಾಡಲಾಯಿತು. ತಮಿಳು ನಟ ಧನುಷ್‌ ಕ್ಯಾಪ್ಟನ್ ಮಿಲ್ಲರ್ ಸಿನೆಮಾ ಹಾಗೂ ರಾಯನ್ ಸಿನೆಮಾ ನಿರ್ದೇಶನಕ್ಕೆ ರಜತ ಕಮಲ ಸ್ವೀಕರಿಸಿದರು.

ಆರ್ಟಿಕಲ್ 370 ಸಿನಿಮಾಗೆ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ, ಯಾಮಿ ಗೌತಮ್ ಅವರಿಗೆ ಅತ್ಯುತ್ತಮ ನಟಿ ಹಾಗೂ ಬ್ರಹ್ಮಯುಗಂ ಚಿತ್ರದ ನಟನೆಗಾಗಿ ಮಮ್ಮುಟ್ಟಿ ಮತ್ತು ಚಂದು ಚಾಂಪಿಯನ್ ಚಿತ್ರದ ನಟನೆಗಾಗಿ ಕಾರ್ತಿಕ್ ಆರ್ಯನ್ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅಮರನ್ ಚಿತ್ರದ ನಿರ್ದೇಶಕ ರಾಜ್‌ಕುಮಾರ್ ಪೆರಿಯಸಾಮಿ ಅವರು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಅತ್ಯುತ್ತಮ ಪ್ರವಾಸಿ ತಾಣಗಳನ್ನು ಗುರುತಿಸಿ, ಪ್ರಸ್ತಾವನೆ ಸಲ್ಲಿಸಲು ರಾಜ್ಯಗಳಿಗೆ ಆಹ್ವಾನ:
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭವನ್ನು ಆಯೋಜಿಸಲು ತಮ್ಮ ರಾಜ್ಯದಲ್ಲಿರುವ ಅತ್ಯುತ್ತಮ ಪ್ರವಾಸಿ ತಾಣಗಳನ್ನು ಗುರುತಿಸಿ ಪ್ರಸ್ತಾವನೆ ಸಲ್ಲಿಸುವಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಎಲ್ಲಾ ರಾಜ್ಯಗಳಿಗೆ ಆಹ್ವಾನ ನೀಡಿದ್ದಾರೆ. ನೀವು ಗುರುತಿಸಿರುವ ತಾಣಗಳು ಅತ್ಯುತ್ತಮ ಸೌಲಭ್ಯ ಹಾಗೂ ಸರ್ವತೋಮುಖ ಅಭಿವೃದ್ಧಿಯ ಯೋಜನೆಯಾಗಿರಬೇಕು. ಯಾವ ರಾಜ್ಯದ ಪ್ರಸ್ತಾವನೆ ಆಯ್ಕೆಯಾಗುತ್ತದೆಯೋ, ಆ ರಾಜ್ಯದ ನಿರ್ದಿಷ್ಟ ಪ್ರವಾಸಿ ತಾಣದಲ್ಲಿ ಮುಂದಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭವನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿಕೆಶಿ

Spread the loveಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ