ನೈರುತ್ಯ ರೈಲ್ವೆಯಿಂದ 312 ಐಸೋಲೇಷನ್ ಬೋಗಿಗಳ ನಿರ್ಮಾಣ; ಕೇಂದ್ರ ಸಚಿವ ಸುರೇಶ್ ಅಂಗಡಿ

Spread the love

ಹುಬ್ಬಳ್ಳಿ: ರೈಲ್ವೆ ಇಲಾಖೆಯ 10 ದಿನದಲ್ಲಿ 80 ಸಾವಿರ ಬೆಡ್‍ಗಳ ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಿದೆ. ಹುಬ್ಬಳ್ಳಿ ನೈರುತ್ಯ ರೈಲ್ವೆ ವತಿಯಿಂದ 312 ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು.

ಹುಬ್ಬಳ್ಳಿಯ ರೈಲ್ವೆ ವರ್ಕಶಾಪ್ ನಲ್ಲಿ ನಿರ್ಮಿಸಲಾಗಿರುವ ಐಸೋಲೇಷನ್ ಬೋಗಿಗಳನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನಂತೆ ದೇಶಾದ್ಯಂತ 20 ಸಾವಿರ ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ 5,000 ಸ್ಲೀಪರ್ ಬೋಗಿಗಳನ್ನು ಐಸೋಲೇಷನ್ ಬೋಗಿಗಳನ್ನಾಗಿ ಪರಿವರ್ತಿಸಲಾಗಿದೆ. ಒಟ್ಟು 3,20,000 ಐಸೋಲೇಷನ್ ಬೆಡ್‍ಗಳನ್ನು ರೈಲ್ವೆ ಇಲಾಖೆಯಿಂದ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದರು.

ಈಗ ನಿರ್ಮಿಸಿರುವ ಐಸೋಲೇಷನ್ ಬೋಗಿಗಳನ್ನು ಆರೋಗ್ಯ ಇಲಾಖೆ ಹಾಗೂ ಗೃಹ ಇಲಾಖೆ ನಿರ್ದೇಶನದ ಮೇರೆಗೆ, ಅಗತ್ಯ ಇರುವ ಕಡೆ ಸೇವೆಗಾಗಿ ಕಳುಹಿಸಿಕೊಡಲಾಗುವುದು. ಕೊರೋನಾ ಪಾಸಿಟಿವ್ ಬಂದ ವ್ಯಕ್ತಿಗಳನ್ನು ಐಸೋಲೇಷನ್ ಬೋಗಿಗಳಲ್ಲಿ ಇರಿಸಿ ಚಿಕಿತ್ಸೆ ನೀಡಬಹುದಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

17 ಪಿಎಸ್‌ಐಗಳ ವರ್ಗಾವಣೆ

Spread the loveಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 17 ಪೊಲೀಸ್ ಸಬ್ ಇನ್ಸಪೆಕ್ಟರ್‌ಗಳನ್ನು (ಪಿಎಸ್‌ಐ) ನಗರದ ವಿವಿಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ