Breaking News

ಅಂಗನವಾಡಿ ಕಾರ್ಯಕರ್ತೆಯರ ಬೇಸಿಗೆ ರಜೆ ಕಡಿತಕ್ಕೆ ಆಕ್ರೋಶ: ಒಂದು ತಿಂಗಳ ರಜೆಗಾಗಿ ಬೆಳಗಾವಿ ತಾಲೂಕು ಸಮಿತಿ ಆಗ್ರಹ

Spread the love

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಬಾರಿ ಬೇಸಿಗೆ ರಜೆ ಕಡಿತಗೊಳಿಸಿರುವ ಸರ್ಕಾರದ ಆದೇಶಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಕಳೆದ ವರ್ಷದಂತೆ ಈ ಬಾರಿಯೂ ಪೂರ್ಣ ಒಂದು ತಿಂಗಳ ರಜೆ ನೀಡಬೇಕೆಂದು ಒತ್ತಾಯಿಸಿ ಬೆಳಗಾವಿ ತಾಲೂಕು ಸಮಿತಿಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಆಗ್ರಹಿಸಿದೆ.

ಬೆಳಗಾವಿ ತಾಲೂಕಿನ ಅಂಗನವಾಡಿ ನೌಕರರ ಸಂಘ (CITU) ಸರ್ಕಾರಕ್ಕೆ ಪ್ರಬಲ ಒತ್ತಾಯವೊಂದನ್ನು ಮಂಡಿಸಿದೆ. 2025ನೇ ಸಾಲಿನಲ್ಲಿ ನೀಡಲಾಗಿದ್ದ ಒಂದು ತಿಂಗಳ ಪೂರ್ಣ ಬೇಸಿಗೆ ರಜೆಯನ್ನು ಈ ವರ್ಷವೂ ಮುಂದುವರಿಸಬೇಕು ಎಂದು ಸಂಘದ ಅಧ್ಯಕ್ಷರಾದ ಮಂದಾ ವಿ. ನೇವಗಿ ಅವರು ಒತ್ತಾಯಿಸಿದ್ದಾರೆ. ಪ್ರಸಕ್ತ ವರ್ಷದ ಸರ್ಕಾರಿ ಆದೇಶದಲ್ಲಿ ರಜೆಯ ಅವಧಿಯನ್ನು ಕಡಿತಗೊಳಿಸಿರುವುದು ಕಾರ್ಯಕರ್ತೆಯರಲ್ಲಿ ಅಸಮಾಧಾನ ಮೂಡಿಸಿದೆ ಎಂದು ಅವರು ತಿಳಿಸಿದ್ದಾರೆ. ಸರ್ಕಾರದ ಇತ್ತೀಚಿನ ಆದೇಶದನ್ವಯ ಏಪ್ರಿಲ್ 16 ರಿಂದ ಏಪ್ರಿಲ್ 30 ರವರೆಗೆ ಮಾತ್ರ ರಜೆ ನೀಡಲಾಗಿದ್ದು, ಉಳಿದ ದಿನಗಳಲ್ಲಿ ನೋಂದಣಿ ಅಭಿಯಾನದ ಹೆಸರಿನಲ್ಲಿ ಕೇಂದ್ರಗಳನ್ನು ತೆರೆಯಲು ಸೂಚಿಸಲಾಗಿದೆ. ಇದು ಅವೈಜ್ಞಾನಿಕವಾಗಿದ್ದು, ಕನಿಷ್ಠ 30 ದಿನಗಳ ಕಾಲ ರಜೆ ನೀಡಿ ಆ ಅವಧಿಯ ಪೌಷ್ಟಿಕಾಹಾರವನ್ನು (THR) ಫಲಾನುಭವಿಗಳಿಗೆ ಮುಂಚಿತವಾಗಿಯೇ ವಿತರಿಸಲು ಅವಕಾಶ ನೀಡಬೇಕು. ತಕ್ಷಣವೇ ಈ ಆದೇಶವನ್ನು ಮಾರ್ಪಡಿಸಿ ಹೊಸ ಆದೇಶ ಹೊರಡಿಸಬೇಕೆಂದು ಸಂಘವು ಇಲಾಖೆಯ ನಿರ್ದೇಶಕರಿಗೆ ಮನವಿ ಮಾಡಿದೆ.
ಈ ಸಂದರ್ಭದಲ್ಲಿ ಮಂದಾ ನೇವಗಿ, ಮದಿನಾ ಜಮಾದಾರ, ನಿರ್ಮಲಾ ಬುರುಡ, ಸಪ್ನಾ ಉಪ್ಪರಗಿ, ಅಂಜನಾ ಕಾಂಬಳೆ, ಭಾರತಿ ಗುಡಪ್ಪನ್ನವರ, ಲತಾ ಹೀರಾಪ್ಪಾಚೆ, ಸುಮಿತಾ ಪೋಟೆ ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ಧರು.


Spread the love

About Laxminews 24x7

Check Also

ಹುಬ್ಬಳ್ಳಿಯಲ್ಲಿ 3 ಯುದ್ಧ ವಿಮಾನಗಳ ಹಾರಾಟ – ಆತಂಕಕ್ಕೊಳಗಾದ ಜನ

Spread the loveಹುಬ್ಬಳ್ಳಿ: ನಗರದಲ್ಲಿ  ಮೂರು ಯುದ್ಧ ವಿಮಾನಗಳು ಕೆಳಮಟ್ಟದಲ್ಲಿ ಹಾರಾಟ ನಡೆಸಿದ್ದು ಜನ ಆತಂಕಕ್ಕೊಳಗಾಗಿದ್ದಾರೆ. ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ