Breaking News

ಜನಪ್ರತಿನಿಧಿಗಳು ಹಾಗೂ ಅವರ ಕಾರ್ಯದರ್ಶಿಗಳು ಸ್ಪಂದಿಸಿದ ರೀತಿ ನನ್ನನ್ನು ಮಂತ್ರಮುಗ್ದನ್ನಾಗಿಸಿದೆ.

Spread the love

ಬೆಂಗಳೂರು: ನಟ ಅನಿರುದ್ಧ್ ಕಿರುತೆರೆಯ ಧಾರಾವಾಹಿ ಮೂಲಕ ಮನೆ ಮಾತಾಗಿದ್ದು, ಜೊತೆ ಜೊತೆಯಲಿ ಸೀರಿಯಲ್‍ನಿಂದ ಕನ್ನಡಿಗರ ಮನ ಗೆದ್ದಿದ್ದಾರೆ. ಹೀಗಾಗಿ ಅವರಿಗೆ ಫ್ಯಾನ್ ಫಾಲೋವರ್ಸ್ ಹೆಚ್ಚಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಹ ಈ ಧಾರಾವಾಹಿ ಹವಾ ಹೆಚ್ಚಾಗಿದೆ. ನಟ ಅನಿರುದ್ಧ ಹೆಚ್ಚು ಪ್ರಸಿದ್ಧಿ ಪಡೆಯುತ್ತಿದ್ದಾರೆ.

ನಟ ಅನಿರುದ್ಧ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದು, ತಮ್ಮ ವೃತ್ತಿ ಜೀವನದ ಕುರಿತು ಅಪ್‍ಡೇಟ್ ನೀಡುವುದರ ಜೊತೆಗೆ, ವೈಯಕ್ತಿಕ ವಿಚಾರಗಳನ್ನೂ ಹಂಚಿಕೊಳ್ಳುತ್ತಿರುತ್ತಾರೆ. ಅದೇ ರೀತಿ ತಮ್ಮ ಬರಹದ ಮೂಲಕ ಮೂಲಕ ಸಮಾಜದ ಆಗುಹೋಗುಗಳನ್ನು ಚಿತ್ರೀಸುತ್ತಿರುತ್ತಾರೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿರುವ ಚಿತ್ರದುರ್ಗದ ರೈತ ಮಹಿಳೆಯ ನೆರವಿಗೆ ನಿಂತಿದ್ದು, ಸಚಿವರು, ಸಂಸದರು ಹಾಗೂ ಶಾಸಕರಿಗೆ ಕರೆ ಮಾಡಿ ರೈತರಿಗೆ ನೆರವಾಗುವಂತೆ ಮನವಿ ಮಾಡಿದ್ದಾರೆ.

ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಅವರು ಪೋಸ್ಟ್ ಮಾಡಿದ್ದು, ರೈತ ಮಹಿಳೆಯ ಹೃದಯವಿದ್ರಾವಕ ವಿಡಿಯೋ ನೋಡಿದೆ. ನಮ್ಮೆಲ್ಲರಿಗೂ ಸಮಾಜಕ್ಕೆ ಕೊಡುಗೆ ನೀಡಬೇಕು, ನೆರವಾಗಬೇಕು ಎಂಬ ಇಚ್ಛಾಶಕ್ತಿ ಹಾಗೂ ಸಾಮಥ್ರ್ಯ ಇದೆ ಎಂದು ನಾನು ನಂಬಿದ್ದೇನೆ. ಈಗಾಗಲೇ ಹಲವರು ಇದನ್ನು ಮಾಡಿದ್ದಾರೆ, ರೈತ ಮಹಿಳೆಯ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ನಿಮ್ಮದೇಯಾದ ಕೊಡುಗೆ ನೀಡಿದ್ದೀರಿ. ಮಾಧ್ಯಮದವರೂ ಸಹ ಈ ಕುರಿತು ಅಗತ್ಯ ಪ್ರಾಮುಖ್ಯತೆ ನೀಡಿ ಬೆಳಕು ಚೆಲ್ಲಿದ್ದೀರಿ. ಅದೇ ರೀತಿ ನಾನೂ ಸಹ ನ್ನದೇಯಾದ ದಾರಿಯಲ್ಲಿ ಕೆಲಸ ಮಾಡಿದ್ದೇನೆ. ಸಂಸದ ತೇಜಸ್ವಿಸೂರ್ಯ, ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ನಾರಾಯಣ ಗೌಡರಿಗೆ ಕರೆ ಮಾಡಿ ಈ ಕುರಿತು ಮನವರಿಕೆ ಮಾಡಿದ್ದೇನೆ ಎಂದಿದ್ದಾರೆ.

ರೈತ ಮಹಿಳೆಯ ವಿಡಿಯೋ ವಿಚಾರವಾಗಿ ಈ ಜನಪ್ರತಿನಿಧಿಗಳು ಹಾಗೂ ಅವರ ಕಾರ್ಯದರ್ಶಿಗಳು ಸ್ಪಂದಿಸಿದ ರೀತಿ ನನ್ನನ್ನು ಮಂತ್ರಮುಗ್ದನ್ನಾಗಿಸಿದೆ. ಅಲ್ಲದೆ ಸರ್ಕಾರವೇ ಈ ಕುರಿತು ಮುತುವರ್ಜಿ ವಹಿಸಿರುವುದು ಇನ್ನೂ ಸಂತಸ ತಂದಿದೆ. ಅಲ್ಲದೆ ಈರುಳ್ಳಿ ಬೆಳೆ ಖರೀದಿಗೆ ಮುಂದಾಗಿದೆ. ಇದೆಲ್ಲ ನನ್ನ ನಂಬಿಕೆಗೆ ಬಲ ತುಂಬಿದಂತಾಗಿದ್ದು, ನಮ್ಮ ಜನ ಹೃದಯ ಶ್ರೀಮಂತಿಕೆ ಉಳ್ಳವರು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಇದೊಂದೇ ಪ್ರಕರಣವಲ್ಲ ಇದೇ ರೀತಿ ಅನೇಕ ರೈತರು ಕಷ್ಟ ಅನುಭವಿಸುತ್ತಿದ್ದಾರೆ. ನಮ್ಮಲ್ಲಿ ಕೃಷಿ ಕ್ರಾಂತಿಯಾಗಬೇಕಿದೆ. ಆ ಶಕ್ತಿ ನಮ್ಮಲ್ಲಿದೆ ಅದನ್ನು ಬಳಕೆ ಮಾಡಿಕೊಳ್ಳಬೇಕಷ್ಟೇ ಎಂದು ಹೇಳಿದ್ದಾರೆ. ಇದಕ್ಕೆ ಅವರ ಅಭಿಮಾನಿಗಳು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದು, ನಿಮ್ಮ ರೈತ ಪರ, ಸಾಮಾಜಿಕ ಕಳಕಳಿಗೆ ಧನ್ಯವಾದಗಳು ಎಂದು ಕಮೆಂಟ್ ಮಾಡಿದ್ದಾರೆ.

ಲಾಕ್‍ಡೌನ್ ಹಿನ್ನೆಲೆ ಧಾರಾವಾಹಿಯ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದ್ದು, ಬಹುತೇಕ ವಾಹಿನಿಗಳು ಮರುಪ್ರಸಾರ ಆರಂಭಿಸಿವೆ. ಹೀಗಾಗಿ ಎಲ್ಲ ನಟ, ನಟಿಯರು ತಮ್ಮ ಮನೆಯಲ್ಲೇ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ.


Spread the love

About Laxminews 24x7

Check Also

ಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್!

Spread the loveಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್! ಬೆಂಗಳೂರು: ವಯೋವೃದ್ಧ ಕಾರು ಚಾಲಕರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ