Breaking News

ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕೈತಪ್ಪಿದ ಅಂಜನಾದ್ರಿ ಬೆಟ್ಟ

Spread the love

ಕೊಪ್ಪಳ: ಅಂಜನಾದ್ರಿ ಬೆಟ್ಟದ ಆಡಳಿತ ವಿಚಾರದಲ್ಲಿ ಧಾರವಾಡ ವಿಭಾಗೀಯ ಪೀಠ ಮಹತ್ವದ ಆದೇಶ ಹೊರಡಿಸಿದೆ. ಅಂಜನಾದ್ರಿ ಬೆಟ್ಟ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕೈತಪ್ಪಿದೆ.

ಕಳೆದ 2018ರಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ-1997ರ ಸೆಕ್ಷನ್ 23(ಬಿ) ಅಡಿಯಲ್ಲಿ ಅಧಿಸೂಚಿತ ದೇವಸ್ಥಾನ ಎಂದು ಘೋಷಿಸಿದ್ದ ಕೊಪ್ಪಳ ಜಿಲ್ಲಾಡಳಿತದ ಅಧಿಸೂಚನೆ ರದ್ದು ಮಾಡಿ ಧಾರವಾಡ ಪೀಠ ಆದೇಶಿಸಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಕಳೆದ 2026ರ ಏ.27 ರಂದು ತೀರ್ಪು ಪ್ರಕಟಿಸಿದ್ದು, ಅ.7 ರಂದು ತೀರ್ಪಿನ ಪೂರ್ಣ ಪ್ರತಿ ಹೊರಬಿದ್ದಿದೆ. ದೇವಸ್ಥಾನದ ಆಡಳಿತಕ್ಕೆ ಸಂಬಂಧಿಸಿದಂತೆ 2018ರಲ್ಲಿ ಹೊರಡಿಸಿದ್ದ ಅಧಿಸೂಚನೆ ಹಾಗೂ ನಂತರ ಕೊಪ್ಪಳ ಜಿಲ್ಲಾಡಳಿತ ಹೊರಡಿಸಿದ್ದ ಎಲ್ಲ ನೇಮಕ ಆದೇಶಗಳನ್ನು ರದ್ದುಪಡಿಸಲಾಗಿದೆ.

ದಾಖಲೆ ಇಲ್ಲ: ಅಂಜನಾದ್ರಿ ಬೆಟ್ಟದ ದೇವಸ್ಥಾನದ ಅರ್ಚಕರಿಗೆ ಸಂಬಂಧಿಸಿದಂತೆ ವಿವಾದ ಉಂಟಾಗಿದೆ. ಈ ಹಿನ್ನೆಲೆ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗೆ ಧಕ್ಕೆ ಆಗುವ ಸಾಧ್ಯತೆ ಇದೆ ಎಂದು ಕಳೆದ 2018ರ ಜುಲೈ 18ರಂದು ಅಂದಿನ ಕೊಪ್ಪಳ ಜಿಲ್ಲಾಧಿಕಾರಿ, ದೇವಸ್ಥಾನದ ಆಡಳಿತವನ್ನು ವಶಕ್ಕೆ ಪಡೆದು ಅಧಿಸೂಚನೆ ಹೊರಡಿಸಲಾಗಿದೆ. ಈ ಮೊದಲು ಸದ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದವರಿಗೆ ನೋಟಿಸ್ ನೀಡಿದ್ದೇವೆ, ವಿಚಾರಣೆ ನಡೆಸಿದ್ದೇವೆ ಎಂಬ ಜಿಲ್ಲಾಡಳಿತ ವಾಸಕ್ಕೆ ಯಾವುದೇ ದಾಖಲೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ. ಹೀಗಾಗಿ 2018ರ ಸೆ.24ರ ಅಧಿಸೂಚನೆ ನೈಸರ್ಗಿಕ ನ್ಯಾಯದ ತತ್ವಗಳ ಉಲ್ಲಂಘನೆಯಿಂದ ದೋಷಪೂರಿತವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಒಂದೊಮ್ಮೆ ರಾಜ್ಯ ಸರ್ಕಾರ ದೇವಸ್ಥಾನವನ್ನು ತಮ್ಮ ವ್ಯಾಪ್ತಿಗೆ ತರಬೇಕು ಎಂದು ಬಯಸಿದಲ್ಲಿ, ಕಾನೂನುಬದ್ಧ ಪ್ರಕ್ರಿಯೆ ಅನುಸರಿಸಬೇಕು. ಸಂಬಂಧಪಟ್ಟವರಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಬೇಕು. ಬಳಿಕ ಹೊಸದಾಗಿ ಅಧಿಸೂಚನೆ ಹೊರಡಿಸಬಹುದು ಎಂದು ಸರ್ಕಾರಕ್ಕೆ ನ್ಯಾಯಾಲಯ ಅವಕಾಶ ನೀಡಿದೆ.

ಪೂಜೆ ಸಲ್ಲಿಸಲು ಅವಕಾಶ: ಪ್ರಧಾನ ಅರ್ಚಕ ವಿದ್ಯಾದಾಸ ಬಾಬಾ ಅವರಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಈ ಹಿಂದೆ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದ್ದವು. ಅದರಂತೆ ಪೂರ್ಣ ಪ್ರಮಾಣದಲ್ಲಿ ವಿದ್ಯಾದಾಸ ಬಾಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅನುಮತಿ ನೀಡಲಾಗಿದೆ.


Spread the love

About Laxminews 24x7

Check Also

ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವು

Spread the loveಹುಬ್ಬಳ್ಳಿ: ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ  ನಡೆದಿದೆ. ಹುಬ್ಬಳ್ಳಿ ಉಣಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ