Breaking News

Bagalkote: ಅಂಜುಮನ್ ಕಮಿಟಿಗೆ ರಾಜ್ಯ ಸರ್ಕಾರದಿಂದ ₹1 ಕೋಟಿ ಅನುದಾನ ಮಂಜೂರು

Spread the love

ಬಾಗಲಕೋಟೆ: ಅಂಜುಮನ್ ಇಸ್ಲಾಂ ಕಮಿಟಿಯ ಅಭಿವೃದ್ಧಿಗಾಗಿ ಹಾಗೂ ಸಂಸ್ಥೆಯ ಬಹುಪಯೋಗಿ ಭವನ ನಿರ್ಮಿಸಲು ಸರಕಾರ ಒಂದು ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಿದೆ ಎಂದು ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಜಾಕ್ ಕುದುರೆ ತಿಳಿಸಿದರು.

ಪಟ್ಟಣದ ಅಂಜುಮನ್ ಇಸ್ಲಾಂ ಕಮಿಟಿ ಕಾರ್ಯಾಲಯದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗುಳೇದಗುಡ್ಡದಲ್ಲಿ ಅಂಜುಮನ್ ಎ ಇಸ್ಲಾಂ ಕಮಿಟಿ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡಿಸಲು ಕಮಿಟಿಯ ಹಿಂದಿನ ಆಡಳಿತ ಮಂಡಳಿ ಸದಸ್ಯರು ಹಾಗೂ ಸಮಾಜದ ಮುಖಂಡರು ಶಾಸಕರ ಮೂಲಕ ಸರ್ಕಾರಕ್ಕೆ ಸಾಕಷ್ಟು ಬಾರಿ ವಿನಂತಿ ಮಾಡಿಕೊಳ್ಳಲಾಗಿತ್ತು.

ಮನವಿಗೆ ಸ್ಪಂದಿಸಿದ ಈ ಕ್ಷೇತ್ರದ ಶಾಸಕ ಭೀಮಸೇನ ಚಿಮ್ಮನಕಟ್ಟಿ ಮತ್ತು ಬಾದಾಮಿ ಮತ ಕ್ಷೇತ್ರದ ಹಿಂದಿನ ಶಾಸಕ ಸಿ.ಎಂ. ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಆಸಕ್ತಿವಹಿಸಿ ಬಹುಪಯೋಗಿ ಭವನ ನಿರ್ಮಿಸಲು ಅನುದಾನ ಮಂಜೂರು ಮಾಡಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಧರ್ಮವೆಂದರೆ ಮೀಸಲಾತಿ ಹೋರಾಟವಲ್ಲ : ಬಸವಲಿಂಗಮಹಾಸ್ವಾಮಿಗಳು

Spread the loveಬಾಗಲಕೋಟೆ: ಧರ್ಮ ಎಂದರೆ ಮೀಸಲಾತಿ ಹೋರಾಟಗಳಲ್ಲ ಅದೊಂದು ಸಾಮಾಜಮುಖಿ ಚಿಂತನೆಯ ನಡೆಯಾಗಿದ್ದು ಇತ್ತೀಚೆಗೆ ಧರ್ಮದ ಮೂಲ ಪರಿಕಲ್ಪನೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ