Breaking News
Home / ಜಿಲ್ಲೆ / ಅಕ್ರಮ ಮದ್ಯ ಮಾರಾಟದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿ: ರವಿ ಡಿ. ಚೆನ್ನಣ್ಣವರ್

ಅಕ್ರಮ ಮದ್ಯ ಮಾರಾಟದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿ: ರವಿ ಡಿ. ಚೆನ್ನಣ್ಣವರ್

Spread the love

ಆನೇಕಲ್: ಅಕ್ರಮ ಮದ್ಯ ಮಾರಾಟದ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ತಿಳಿಸಿದ್ರೆ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಎಸ್.ಪಿ ರವಿ ಡಿ ಚನ್ನಣ್ಣನವರ್ ಹೇಳಿದ್ದಾರೆ.

ಆನೇಕಲ್ ಪಟ್ಟಣದಲ್ಲಿ ಕರುಣೆಯ ಕುಟೀರ ಹಾಗೂ ವಾಚನಾಲಯವನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ಆನೇಕಲ್ ನ ಪೋಲಿಸರು ಹಾಗೂ ಸಾರ್ವಜನಿಕರ ಸಹಯೋಗದೊಂದಿಗೆ ಕರುಣೆಯ ಕುಟೀರ ಹಾಗೂ ವಾಚನಾಲಯ ತೆರೆಯಲಾಗಿದೆ. ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಸಹಾಯ ಮಾಡಬೇಕೆನ್ನುವವರು ಸಹಾಯಹಸ್ತ ನೀಡಬಹುದು. ಬಡವರಿಗೆ ಸಹಾಯ ಆಗುವ ನಿಟ್ಟಿನಲ್ಲಿ ಮಾಡಲಾಗಿದೆ ಎಂದು ತಿಳಿಸಿದರು.

ಅಕ್ರಮ ಮದ್ಯ ಮಾರಾಟವಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದಿವೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ತಿಳಿಸಿದ್ರೆ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಈಗಾಗಲೇ ಬನ್ನೇರುಘಟ್ಟ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.

ಲಾಕ್ ಡೌನ್ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಅನಾವಶ್ಯಕವಾಗಿ ಓಡಾಡುತ್ತಿದ್ದಂತಹ 700ಕ್ಕೂ ಹೆಚ್ಚು ವಾಹನಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ಬೆಂಗಳೂರು ಜಿಲ್ಲೆಯಾದ್ಯಂತ ಲಾಕ್ ಡೌನ್ ಉಲ್ಲಂಘನೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ, ರಾಜನಕುಂಟೆ ಪೋಲಿಸ್ ಠಾಣಾ ವ್ಯಾಪ್ತಿಗಳಲ್ಲಿ 4 ಪ್ರಕರಣಗಳ ಸಂಬಂಧ ದೂರು ದಾಖಲಾಗಿದೆ ಎಂದರು.

ಜಿಗಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧನ ಮಾಡಲಾಗಿದೆ. ಕೊರೋನಾ ಹೊಗಲಾಡಿಸುವ ನಿಟ್ಟಿನಲ್ಲಿ ಪೊಲೀಸರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಗಲಿರುಳು ಶ್ರಮಿಸುತ್ತಿದ್ದು ಅವರನ್ನು ಎಲ್ಲರೂ ಗೌರವಿಸಬೇಕು ಎಂದರು.


Spread the love

About Laxminews 24x7

Check Also

ಮಹಾರಾಷ್ಟ್ರದಂತೆ ರಾಜ್ಯದಲ್ಲೂ ಒಬ್ಬ ಅಜಿತ್​ ಪವಾರ್​ ಹುಟ್ಟಿಕೊಳ್ಳಬಹುದು : ಕುಮಾರಸ್ವಾಮಿ ಭವಿಷ್ಯ

Spread the loveಬೆಂಗಳೂರು: ಮಹಾರಾಷ್ಟ್ರ ರಾಜಕಾರಣದ ಬಗ್ಗೆ ನಾವು ಯಾರೂ ಕೂಡ ಊಹೆಯೂ ಮಾಡಿರಲಿಲ್ಲ. ಯಾಕೆಂದರೆ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ