Breaking News

ಕರ್ನಾಟಕಕ್ಕೆ ಮತ್ತೆ ಕಾವೇರಿ ಆಘಾತ – ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್‌ ನೀರು ಹರಿಸಲು CWRC ಶಿಫಾರಸು

Spread the love

ಬೆಂಗಳೂರು: ಬರದಿಂದ ಬಳಲುತ್ತಿರುವ ಕರ್ನಾಟಕಕ್ಕೆ  ಮತ್ತೆ ಕಾವೇರಿ ಶಾಕ್‌ ಎದುರಾಗಿದೆ. ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ.

ದೆಹಲಿಯಲ್ಲಿಂದು ನಡೆಸಿದ ಸಭೆಯ ಬಳಿಕ, ನಿತ್ಯ 3,000 ಕ್ಯೂಸೆಕ್‌ನಂತೆ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ  ನೀರು ಹರಿಸುವಂತೆ ಸಮಿತಿ ಶಿಫಾರಸ್ಸು ಮಾಡಿದೆ.

ಕಳೆದ ಅಕ್ಟೋಬರ್ 23ರಿಂದ ಕರ್ನಾಟಕವು ಕಾವೇರಿ ನದಿ ನೀರು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿದ್ದರೂ, ಕರ್ನಾಟಕ ನೀರು ಹರಿಸಿಲ್ಲ ಎಂದು ತಮಿಳುನಾಡು ಆರೋಪಿಸಿತ್ತು. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಸುಪ್ರೀಂ ಕೋರ್ಟ್‌ಗೆ ತುರ್ತು ಮನವಿ ಮಾಡಿ ಮಾಡಿತ್ತು.

ಕಾವೇರಿ ನೀರು ಹರಿಸದ ಕಾರಣ 4 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ ಎಂದು ತಮಿಳುನಾಡು ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಕಾವೇರಿ ವಿವಾದದ ವಿಚಾರಣೆಯನ್ನ ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ತಮಿಳುನಾಡು ಮನವಿ ಮಾಡಿತ್ತು. ಮನವಿಯನ್ನು ಪರಿಶೀಲಿಸುವುದಾಗಿ ಮುಖ್ಯ ನ್ಯಾಯಮೂರ್ತಿಗಳ ಪೀಠ ಭರವಸೆ ಕೊಟ್ಟಿತ್ತು. ಈ ಬೆನ್ನಲ್ಲೇ ಕಾವೇರಿ ನೀರು ನಿಯಂತ್ರಣ ಸಮಿತಿ ನೀರು ಹರಿಸುವಂತೆ ಶಿಫಾರಸು ಮಾಡಿದೆ.

ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ನೀರಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್ ಜಲಾಶಯದ (KRS Dam) ನೀರಿನ ಮಟ್ಟ ನವೆಂಬರ್ ಆರಂಭದಲ್ಲೇ 99 ಅಡಿಗೆ ಕುಸಿದಿದ್ದು, ಬೇಸಿಗೆ ಸಮೀಪಿಸುವ ಮುನ್ನವೇ ಜಲಕಂಟಕ ಎದುರಾಗುವ ಆತಂಕ ಸೃಷ್ಟಿಯಾಗಿದೆ.


Spread the love

About Laxminews 24x7

Check Also

ಬೆಂಗ್ಳೂರು ಸರಣಿ ಹತ್ಯೆ ಕೇಸ್ – ನರಹಂತಕ ಇಂದುಶೇಖರ್ 14 ದಿನ ಪೊಲೀಸ್‌ ಕಸ್ಟಡಿಗೆ

Spread the loveಬೆಂಗಳೂರು: ನಗರದಲ್ಲಿ  ನಡೆದ ಸರಣಿ ಹತ್ಯೆ ಪ್ರಕರಣದ ಆರೋಪಿ ಇಂದುಶೇಖರ್‌ನನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ