Breaking News

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ – ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ

Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಸಿಎಂ ಸಿದ್ದರಾಮಯ್ಯ  ಅವರು ಇಂದೇ ಜಾತಿಗಣತಿ  ವರದಿ ಸ್ವೀಕರಿಸಿದ್ದಾರೆ.

ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಕೊಠಡಿಯಲ್ಲಿ ವರದಿ ಸ್ವೀಕರಿಸಿದರು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯ್ಕ್, ಆಯೋಗದ ಸದಸ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳು ಸಿಎಂಗೆ ವರದಿ ಸಲ್ಲಿಸಿದರು.

ವರದಿಯಲ್ಲಿ ಜನಸಂಖ್ಯೆ ಉಲ್ಲೇಖ
ಮುಸ್ಲಿಂ ಶೇ.14 – 75 ರಿಂದ 80 ಲಕ್ಷ
ವೀರಶೈವ ಲಿಂಗಾಯತ ಶೇ.11- 60 ರಿಂದ 65 ಲಕ್ಷ
ಒಕ್ಕಲಿಗರು ಶೇ.10 – 55 ರಿಂದ 60 ಲಕ್ಷ
ಕುರುಬರು ಶೇ.08 – 40 ರಿಂದ 45 ಲಕ್ಷ

ವರದಿ ಸ್ವೀಕಾರ ವೇಳೆ ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಎಂ.ಸಿ.ಸುಧಾಕರ್, ಸತೀಶ್ ಜಾರಕಿಹೊಳಿ, ಚಲುರಾಯಸ್ವಾಮಿ, ಶಾಸಕರಾದ ಕೋನರೆಡ್ಡಿ, ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಹಾಗೂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ್‌, ಸದಸ್ಯರಾದ ಶಿವಣ್ಣಗೌಡ, ಚಂದ್ರಪ್ಪ ಯಾದವ, ಪ್ರತಿಭಾ ಕುಳಾಯಿ, ಡಾ. ಸಿ.ಎಂ.ಕುಂದಗೋಳ, ಡಾ. ಜಿ.ಎನ್.ಶ್ರೀಕಂಠಯ್ಯ ಹಾಗೂ ಸದಸ್ಯ ಕಾರ್ಯದರ್ಶಿ ದಯಾನಂದ್, ಆಡಳಿತಾತ್ಮಕ ಕಾರ್ಯದರ್ಶಿ ಊರ್ಮಿಳಾ ಬಿ, ಡಿ.ಎನ್.ನಾಯಕ್ ಆಯೋಗದ ವಿಶೇಷ ಸಲಹೆಗಾರರು ಮತ್ತು ಇತರೆ ತಜ್ಞರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ – ಆರೋಪಿ ಪುಣ್ಯೇಶ್ ಬಂಧನ

Spread the loveಬೆಂಗಳೂರು: ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ  ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸರು  ಪ್ರಮುಖ ಆರೋಪಿ ಪುಣ್ಯೇಶ್‌ನನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ