Breaking News

ಹಿಂಡಲಗಾ ಜೈಲಿನ ಮತ್ತೊಂದು ಕರ್ಮಕಾಂಡ ಬಯಲು: ಹಣಕ್ಕಾಗಿ ಕೈದಿಗಳ ಜೊತೆ ಮಹಿಳಾ ಪೊಲೀಸ್ ಅಧಿಕಾರಿಯ ಬೆತ್ತಲೆ ವಿಡಿಯೋ ಕಾಲ್

Spread the love

ಬೆಳಗಾವಿ ಹಿಂಡಲಗಾ ಜೈಲಿನ ಹೊಸ ಕರ್ಮಕಾಂಡ ಬಯಲಾಗಿದೆ. ಜೈಲಿನಲ್ಲಿ ಅಧಿಕಾರಿಗಳೇ ಹಣಕ್ಕಾಗಿ ವಿವಿಧ ವಾಮಮಾರ್ಗಗಳ ಮೂಲಕ ಕೈದಿಗಳ ಜೀವ ಹಿಂಡುತ್ತಿದ್ದಾರೆ.

ಜೈಲಿನ ಅಧಿಕಾರಿಗಳೇ ಹಣಕ್ಕಾಗಿ ಕೈದಿಗಳಿಗೆ ಮೊಬೈಲ್, ನಿಷೇಧಿತ ವಸ್ತುಗಳನ್ನು ತಂದು ಮಾರಾಟ ಮಾಡುತ್ತಾರೆ ಎಂದು ಯುವಕನೊಬ್ಬ ವಿಡಿಯೋ ಮೊಲಕ ಮಾಹಿತಿ ನೀಡಿದ್ದಾನೆ.

ತುಮಕೂರು ಮೂಲದ ಸಾಯಿಕುಮಾರ್ ಎಂಬ ಯುವಕ 2024ರಲ್ಲಿ ಹಿಂಡಲಗಾ ಜೈಲಿನಲ್ಲಿ ಕೈದಿಯಾಗಿದ್ದ ಸಂದರ್ಭದಲ್ಲಿ ಅಲ್ಲಿ ನಡೆಯುತ್ತಿದ್ದ ಅವಾಂತರಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಹಿಂದಲಗಾ ಜೈಲಿನಲ್ಲಿ ವೇಶ್ಯಾವಾಟಿಕೆ ಎಗ್ಗಿಲ್ಲದೇ ನಡೆಯುತ್ತದೆ ಎಂದು ಯುವಕ ಆರೋಪಿಸಿದ್ದಾನೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೆ ನಮ್ಮ ಮೇಲೆ ಸುಳ್ಳು ಕೇಸ್ ಹಾಕುತ್ತಾರೆ. ಅಧಿಕಾರಿಗಳೇ ಜೈಲಿನಲ್ಲಿ ಮೊಬೈಲ್, ಗಾಂಜಾ, ಮಾದಕ ವಸ್ತುಗಳನ್ನು ಸಪ್ಲೈ ಮಾಡುತ್ತಾರೆ ಎಂದಿದ್ದಾನೆ.

ಅಲ್ಲದೇ ಹಣಕ್ಕಾಗಿ ಕೈದಿಗಳ ಜೊತೆ ಬೆತ್ತಲೆ ವಿಡಿಯೋ ಕಾಲ್ ಮಾಡುವ ಮಹಿಳಾ ಪೊಲೀಸ್ ಅಧಿಕಾರಿಯೊರ್ವಳು ಕಳೆದ ಕೆಲ ತಿಂಗಳ ಹಿಂದೆ ಬೆಳಗಾವಿ ಹಿಂಡಲಗಾ ಜೈಲಿನ ಭದ್ರತಾ ಅಧಿಕಾರಿಯಾಗಿದ್ದಳು ಎಂಬ ಅಂಶ ಬೆಳಕಿಗೆ ಬಂದಿದೆ. ಈ ಮಹಿಳೆ ಕೈದಿಗಳ ಜೊತೆ ಅಕ್ರಮ್ ಅಸಂಬಂಧ ಹೊಂಡಿದ್ದಲ್ಲದೇ ನಿಷೇಧಿತ ವಸ್ತುಗಳನ್ನು ಕಳ್ಳ ಮಾರ್ಗದ ಮೂಲಕ ಜೈಲಿನೊಳಗೆ ತಲುಪಿಸುವ ಕೆಲಸ ಮಾಡುತ್ತಿದ್ದಳು.

ಸಹ ಅಧಿಕಾರಿ ಜೊತೆ ಕಿರಿಕ್ ಆಗಿದ್ದರಿಂದ ಈ ಮಹಿಳಾ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಹಿರಿಯ ಅಧಿಕಾರಿಗಳ ಮಧ್ಯಸ್ಥಿಕೆಯಲ್ಲಿ ಪ್ರಕರಣ ಮುಚ್ಚಿ ಹಾಕಲಾಗಿತ್ತು ಎನ್ನಲಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಎರಡು ಚರಣ ಹಾಡುವ ನಿರ್ಧಾರ ದೇಶ ವಿರೋಧಿ: ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

Spread the loveಚೆನ್ನೈ: ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಕಾಂಗ್ರೆಸ್‌ ಕಾರ್ಯಕ್ರಮಗಳಲ್ಲಿ ಹಾಡುವ ನಿರ್ಧಾರಕ್ಕೆ ಕೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ