ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಮಾನನಷ್ಟ ಮೊಕದ್ದಮೆ ಕೇಸಲ್ಲಿ ನ್ಯಾಯಾಲಯ ಜನಾರ್ದನ ರೆಡ್ಡಿಗೆ ಸಮನ್ಸ್ ಜಾರಿ ಮಾಡಿದೆ.
ತಮಿಳುನಾಡು ಸಂಸದ ಸಸಿಕಾಂತ್ ಸೆಂಥಿಲ್ ನೀಡಿದ್ದ ಮಾನನಷ್ಟ ಕೇಸ್ ಅಲ್ಲಿ ಸಮನ್ಸ್ ಜಾರಿಯಾಗಿದೆ. ಪ್ರಕರಣ ಸಂಬಂದ ಕಾಗ್ನಿಜೆನ್ಸ್ ತೆಗೆದುಕೊಂಡ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕ್ರಿಮಿನಲ್ ಕೇಸ್ ದಾಖಲಿಸಿಕೊಂಡು ಸಮನ್ಸ್ ಜಾರಿಗೊಳಿಸಿದೆ. ನ್ಯಾ.ಸಂದೀಪ್ ಪಾಟೀಲ್ ಅವರಿಂದ ಸಮನ್ಸ್ ಜಾರಿಯಾಗಿದ್ದು, ಧರ್ಮಸ್ಥಳ ವಿರುದ್ಧದ ಷಡ್ಯಂತ್ರದ ಹಿಂದೆ ಸೆಸಿಕಾಂತ್ ಸೆಂಥಿಲ್ ಇದ್ದಾರೆ ಎಂಬ ಆರೋಪ ಮಾಡಲಾಗಿತ್ತು. ಚಿನ್ನಯ್ಯನಿಗೆ ಆಶ್ರಯ ಸೇರಿ ಷಡ್ಯಂತ್ರದ ಭಾಗ ಆಗಿದ್ದರೆಂಬ ಜನಾರ್ದನ ರೆಡ್ಡಿ ಆರೋಪ ಮಾಡಿದ್ದರು.
ಈ ವಿಚಾರಕ್ಕಾಗಿ ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ್ದ ಸೆಂಥಿಲ್ ಕಾನೂನು ಹೋರಾಟ ಮುಂದುವರೆಸಿದರು. ವಿಚಾರಣೆ ನಡೆಸಿದ ಕೋರ್ಟ್ ಕಾಗ್ನಿಜೆನ್ಸ್ ತೆಗೆದುಕೊಂಡು ಆರೋಪಿಗೆ ಸಮನ್ಸ್ ನೀಡಿ ಆಗಸ್ಟ್ 24ಕ್ಕೆ ಖುದ್ದು ಹಾಜರಾಗುವಂತೆ ಸೂಚಿಸಿದೆ.
Laxmi News 24×7