Breaking News

ಹಾಸನದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ – ರಸ್ತೆ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

Spread the love

ಹಾಸನ: ಬೇಲೂರು  ತಾಲೂಕಿನ, ನಾಗೇನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ  ಮತ್ತೊಂದು ಬಲಿಯಾಗಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ ದಾಳಿ ಮಾಡಿದ ಕಾಡಾನೆ, ವ್ಯಕ್ತಿಯೊಬ್ಬರನ್ನು ಕಾಲಿನಿಂದ ತುಳಿದು ಸಾಯಿಸಿದೆ.

ಹಫೀಜುರ್ ರೆಹಮಾನ್ (57) ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿ. 3 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಎರಡನೇ ಬಲಿಯಾಗಿದೆ. ಸದ್ಯ ಹಫೀಜುರ್ ರೆಹಮಾನ್ ಮೃತದೇಹವನ್ನು ಬೇಲೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಳೆದ ಶನಿವಾರ ಕಾಡಾನೆ ದಾಳಿಯಿಂದ ಚೌಡನಹಳ್ಳಿ ಗ್ರಾಮದ ಜಯಮ್ಮ ಮೃತಪಟ್ಟಿದ್ದರು. ಭಾನುವಾರ ಮಧ್ಯಾಹ್ನದವರೆಗೂ ಜಯಮ್ಮ ಮೃತದೇಹವಿಟ್ಟು ಗ್ರಾಮಸ್ಥರು, ರೈತ ಸಂಘ ಹಾಗೂ ಕಾಫಿ ಬೆಳೆಗಾರರು ಪ್ರತಿಭಟನೆ ನಡೆಸಿದ್ದರು. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದ್ದರು. ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಬೇಲೂರು ಭಾಗದಲ್ಲಿರುವ ಎಲ್ಲಾ ಕಾಡಾನೆಗಳನ್ನು ಭದ್ರ ಅರಣ್ಯಕ್ಕೆ ಓಡಿಸುವುದಾಗಿ ಘೋಷಣೆ ಮಾಡಿ ಸಿಸಿಎಫ್ ಏಡುಕುಂಡಲ ಆದೇಶ ಮಾಡಿದ್ದರು. ಇಂದು ಬೇಲೂರು ಭಾಗಕ್ಕೆ ಕುಮ್ಕಿ ಆನೆಗಳು ಆಗಮಿಸಲಿವೆ. ಮಂಗಳವಾರದಿಂದ ಕಾರ್ಯಾಚರಣೆ ಆರಂಭವಾಗಬೇಕಿತ್ತು. ಕಾಡಾನೆ ದಾಳಿಗೆ ಜಯಮ್ಮ ಸಾವಿನ ಬೆನ್ನಲ್ಲೇ ಇಂದು ಕಾಡಾನೆ ದಾಳಿಗೆ ಮತ್ತೋರ್ವ ಬಲಿಯಾಗಿದ್ದಾರೆ. ಈ ಹಿನ್ನೆಲೆ ತಾಲೂಕು ಆಸ್ಪತ್ರೆ ಎದುರು ನೂರಾರು ಜನರು ಜಮಾಯಿಸಿದ್ದು, ಆಸ್ಪತ್ರೆಯೊಳಗೆ ಅಂಬುಲೆನ್ಸ್ ಹೋಗದಂತೆ ಅಡ್ಡಗಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮೃತದೇಹ ತೆಗೆದುಕೊಂಡು ಹೋಗುವಂತೆ ಪಟ್ಟು ಹಿಡಿದಿದ್ದು, ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಲಾಗುತ್ತಿದೆ. ಅಲ್ಲದೇ ಘಟನಾ ಸ್ಥಳಕ್ಕೆ ಪ್ರತಿಭಟನಾಕಾರರು ಅಂಬುಲೆನ್ಸ್ ತಳ್ಳಿಕೊಂಡೇ ಹೋಗುತ್ತಿದ್ದು, ಗ್ರಾಮಸ್ಥರು ಅರಣ್ಯ ಇಲಾಖೆ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಪ್ರಕರಣ ಸಂಬಂಧ ಬೇಲೂರಿನಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ರಸ್ತೆ ತಡೆದು ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ನಾಗೇನಹಳ್ಳಿ ಗ್ರಾಮದಲ್ಲೂ ಪ್ರತಿಭಟನೆ ಜೋರಾಗಿದೆ. ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವಿನ ತಳ್ಳಾಟದಲ್ಲಿ ಸಬ್‌ಇನ್ಸ್ಪೆಕ್ಟರ್ ಕೈಗೆ ಗಾಯವಾಗಿದೆ. ಅರೇಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಯೋಗಭರಂ ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸಪಡುತ್ತಿದ್ದಾರೆ.


Spread the love

About Laxminews 24x7

Check Also

ಬೆಲೆ ಏರಿಕೆ ಖಂಡಿಸಿ ಬಾಗಲಕೋಟೆಯಲ್ಲಿ ಕೆಆರ್‌ಎಸ್ ಕಾರ್ಯಕರ್ತರ ಪ್ರತಿಭಟನೆ

Spread the loveಬಾಗಲಕೋಟೆ: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ