Breaking News

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

Spread the love

ಯಾದಗಿರಿ: ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ  ಮಲ್ಲಿಕಾರ್ಜುನ ಮುತ್ಯಾಗೆ  ಮತ್ತೆ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ವಜಾಗೊಳಿಸಿದೆ.

ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ಇಂದು (ಮಾ.9) ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿ ವಜಾ ಬೆನ್ನಲ್ಲೇ ಇದೀಗ ಮುತ್ಯಾ ಭಕ್ತರು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಜಾಮೀನು ಪಡೆಯಲು ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

ಬಾಲಕಿಯ ಜೊತೆ ಮಲ್ಲಿಕಾರ್ಜುನ ಮುತ್ಯಾ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದರ ಬೆನ್ನಲ್ಲೇ ಮುತ್ಯಾನ ವಿರುದ್ಧ ಕ್ರಮ ಜರುಗಿಸಲು ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ದೂರು ದಾಖಲಿಸಿಕೊಂಡಿತ್ತು. ಯಾದಗಿರಿ ಎಸ್ಪಿ ಅವರಿಗೆ ಪತ್ರವನ್ನೂ ಬರೆದಿದ್ದರು. ಅದರಂತೆ ಗೋಗಿ ಪೊಲೀಸ್ ಠಾಣೆಯಲ್ಲಿ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈಗಾಗಲೇ ಪೊಲೀಸ್ ಠಾಣೆಗೆ ಹಾಜರಾಗಿ ಮಲ್ಲಿಕಾರ್ಜುನ ಮುತ್ಯಾ ತನಿಖೆಗೆ ಸಹಕರಿಸಿದ್ದಾರೆ.


Spread the love

About Laxminews 24x7

Check Also

ಗಾಂಧಿ ಪಾಕಿಸ್ತಾನದ ಪಿತಾಮಹ, ಓಮರ್ ಅಬ್ದುಲ್ಲಾ, ರಾಹುಲ್ ಗಾಂಧಿ ಒಂದೇ ಪ್ರೊಡಕ್ಷನ್ : ಯತ್ನಾಳ್ ವಿವಾದದ ಹೇಳಿಕೆ ವೈರಲ್!

Spread the loveಯಾದಗಿರಿ : ಮಹಾತ್ಮ ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ. ಪಾಕಿಸ್ತಾನದ ರಾಷ್ಟ್ರಪಿತ ಎಂದು ಶಾಸಕ ಬಸನಗೌಡ ಪಾಟೀಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ