Breaking News

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬೈರತಿ ಬಸವರಾಜ್

Spread the love

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಬೈರತಿ ಬಸವರಾಜ್  ಅವರು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್  ಮೆಟ್ಟಿಲೇರಿದ್ದಾರೆ.

ಬುಧವಾರ (ಜ.11) ಬೆಳಿಗ್ಗೆ ಮಾಜಿ ಸಚಿವ ಬೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈವರೆಗೂ ಅರ್ಜಿ ವಿಚಾರಣೆಯ ದಿನಾಂಕ ನಿಗದಿಯಾಗಿಲ್ಲ. ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ರದ್ದಾಗಿದ್ದರಿಂದ ಬೈರತಿ ಬಸವರಾಜ್ ಸದ್ಯ ಅಜ್ಞಾತ ವಾಸಕ್ಕೆ ಸ್ಥಳಕ್ಕೆ ತೆರಳಿದ್ದಾರೆ.

ಇತ್ತ ಸಿಐಡಿ ಅಧಿಕಾರಿಗಳು ಬೈರತಿ ಬಸವರಾಜ್‌ಗೆ ಹುಡುಕಾಟ ನಡೆಸಿದ್ದಾರೆ. ಮೂರು ತಿಂಗಳ ಹಿಂದೆ ಸಿಐಡಿ ಅಧಿಕಾರಿಗಳು ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಆದರೆ ಹೈಕೋರ್ಟ್ ರಜಾ ಕಾಲ ಪೀಠದಿಂದ ಜಾಮೀನು ಆದೇಶ ನೀಡಿತ್ತು. ಜಾಮೀನು ಸಿಕ್ಕ ನಂತರ ಲುಕ್ ಔಟ್ ನೋಟಿಸ್ ಮಾನ್ಯತೆ ಕಳೆದುಕೊಂಡಿತ್ತು. ಹಾಗಾಗಿ ಮತ್ತೊಮ್ಮೆ ಲುಕ್ ಔಟ್ ನೋಟಿಸ್ ಹೊರಡಿಸಬೇಕೋ? ಇಲ್ಲವೋ? ಅನ್ನೋ ಚರ್ಚೆ ನಡೆದಿದೆ. ಈ ಬಗ್ಗೆ ಸಿಐಡಿ ಅಧಿಕಾರಿಗಳು ಕಾನೂನು ತಜ್ಞರ ಜೊತೆಗೆ ಚರ್ಚಿಸಲು ನಿರ್ಧರಿಸಿದ್ದಾರೆ. ಫೆಬ್ರವರಿ 4ರಿಂದಲೂ ಬೈರತಿ ಬಸವರಾಜ್ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಸಿಐಡಿ ಪೊಲೀಸರು ಮುಂಬೈಗೆ ತೆರಳಿ ಹುಡುಕಾಟ ನಡೆಸಿದ್ದಾರೆ.


Spread the love

About Laxminews 24x7

Check Also

ತಕ್ಷಣವೇ ದಲಿತರ ಮೀಸಲಾತಿ ಹೆಚ್ಚಿಸಬೇಕು – ಛಲವಾದಿ ಆಗ್ರಹ

Spread the loveಬೆಂಗಳೂರು: ಈ ಹಿಂದೆ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರ ಇದ್ದಾಗ ಏರಿಕೆ ಮಾಡಿದ್ದ ದಲಿತರ ಮೀಸಲಾತಿಯನ್ನು ಕಾಂಗ್ರೆಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ