Breaking News

ಬೈಕ್ ಅಪಘಾತ : ಸ್ಥಳದಲ್ಲಿಯೇ ಇಬ್ಬರ ಸಾವು.

Spread the love

ಚಿಕ್ಕೋಡಿ : ಬೈಕ್ ಸವಾರರಿಬ್ಬರು ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಾಗರಮುನ್ನೊಳ್ಳಿ ಟೋಲ್ ಗೆಟ್ ಹತ್ತಿರ ನಡೆದಿದೆ.

 

ಮೃತರನ್ನು ಸಿದ್ದಾರ್ಥ ಅಶೋಕ ಖೇಮಲಾಪೊರೆ(24) ಮತ್ತು ಪ್ರಮೋದ ಕರೇಪ್ಪ ನಾಯ್ಕ(24) ಅಂತಾ ತಿಳಿದು ಬಂದಿದೆ.

 

 

 

 

ನಿಪ್ಪಾಣಿ ಸಮೀಪದ ಸ್ತವನಿಧಿಗೆ ದೇವರಿಗೆಂದು ಹೋಗಿ ವಾಪಸ್ಸು ತಮ್ಮೂರಾದ ಬೆಲ್ಲದ-ಬಾಗೇವಾಡಿಗೆ ಬರುವಾಗ ನಾಗರಮುನ್ನೊಳ್ಳಿ ಟೋಲ್ ಗೇಟ್ ಹತ್ತಿರ ಮಳೆಯಾದ ಕಾರಣ ರಸ್ತೆಯಲ್ಲಿ ಬೈಕ್ ಜಾರಿದ ಹಿನ್ನಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

 

ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ