Breaking News

ಭೀಕರ ಬಸ್ ಅಪಘಾತ;7 ಜನ ಸ್ಥಳದಲ್ಲೇ ದುರ್ಮರಣ

Spread the love

ಛತ್ತೀಸ್ ಗಢ: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

 

ಛತ್ತೀಸ್ ಗಢದ ಮದಾಯಿ ಘಾಟ್ ನಲ್ಲಿ ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದ್ದು, ಬಸ್ ಕೊರ್ಬಾ ದಿಂದ ರಾಯಪುರಕ್ಕೆ ತೆರಳುತ್ತಿತ್ತು. ಈ ವೇಳೆ ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ಕೊರ್ಬಾ ಪೊಲೀಸ್ ಅಧೀಕ್ಷಕ ಸಂತೋಷ್ ತಿಳಿಸಿದ್ದಾರೆ.

 

ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕ ನಿಂತಿದ್ದ ಟ್ರಕ್ ಗೆ ಬಸ್ ಗುದ್ದಿದ್ದಾನೆ. ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ