Breaking News

ಕನಿಷ್ಠ ವೇತನಕ್ಕೆ ಒತ್ತಾಯಿಸಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮನವಿ

Spread the love

ಬೆಳಗಾವಿ: ರಾಜ್ಯದ ಅನುಸೂಚಿತ ಉದ್ದಿಮೆಗಳಿಗೆ ಕನಿಷ್ಠ ವೇತನ ಪ್ರಕಟಿಸಬೇಕಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಸೋಮವಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರವು ಏಪ್ರಿಲ್ 2025ರಲ್ಲಿ ರಾಜ್ಯದಲ್ಲಿನ ಅನುಸೂಚಿತ ಉದ್ದಿಮೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಅನ್ವಯವಾಗುವ ಕನಿಷ್ಠ ವೇತನದ ಕರಡು ಅಧಿಸೂಚನೆ ಪ್ರಕಟಿಸಿದ್ದು, ಕಾರ್ಮಿಕ ಸಂಘಟನೆ, ಮಾಲೀಕರ ಸಂಘಟನೆ, ಇತರರು ಆಕ್ಷೇಪಣೆ ಹಾಗೂ ಸಲಹೆ ಸಲ್ಲಿಸಿದ್ದಾರೆ.
ಕನಿಷ್ಠ ವೇತನ ಸಲಹಾ ಮಂಡಳಿ ಈ ಕುರಿತು ಎರಡು ಸುತ್ತು ಚರ್ಚೆ ನಡೆಸಿದೆ. ಕನಿಷ್ಠ ವೇತನ ಸಲಹಾ ಮಂಡಳಿ ತಮ್ಮ ಅಭಿಪ್ರಾಯವನ್ನು 2025 ಆಗಸ್ಟ್‌ನಲ್ಲಿ ಸರ್ಕಾರಕ್ಕೆ ಸಲ್ಲಿಸಿ ಹಲವು ತಿಂಗಳು ಕಳೆದರೂ ವೈಜ್ಞಾನಿಕ ಹಾಗೂ ಕಾನೂನು ಬದ್ಧ ಕನಿಷ್ಠ ವೇತನದ ಅಂತಿಮ ಪ್ರಕಟಣೆ ಆಗಿರುವುದಿಲ್ಲ. ಆದ್ದರಿಂದ ಕೂಡಲೇ ಕನಿಷ್ಠ ವೇತನ ಪರಿಷ್ಕರಣೆ ಮಾಡಿ ಆದೇಶಿಸಬೇಕು ಎಂದು ಒತ್ತಾಯಿದ್ದಾರೆ.
ಮಂದಾ ನೇವಗಿ, ಮೀನಾಕ್ಷಿ ದಪಡೆ, ಸುನೀತಾ ಚನ್ನಬಸಪ್ಪನ್ನವರ, ಸುಶೀಲಾ ತಳವಾರ, ಸುವರ್ಣಾ ಮೋರೆ, ಶೋಭಾ ಕಾಕತಿ ಇತರರಿದ್ದರು.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ