ಬೆಂಗಳೂರು: ಜೂ. 19 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಈರಣ್ಣಾ ಕಡಾಡಿ ಅವರು ಇಂದು ನಾಮಪತ್ರ ಸಲ್ಲಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್ , ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತು ಪ್ರವಾಸೋಧ್ಯಮ ಸಚಿವ ಸಿ.ಟಿ. ರವಿ ಸಮ್ಮುಖದಲ್ಲಿ ಕರ್ನಾಟಕ ವಿಧಾನ ಸಭಾ ಕಾರ್ಯದರ್ಶಿ ಎಂ. ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಇದೇ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಈರಣ್ಣ ಕಡಾದಿ ಮತ್ತು ಅಶೋಕ ಗಸ್ತಿ ಅವರು ಬಿಜೆಪಿ ಅಭ್ಯರ್ಥಿಗಳಾಗಿದ್ದಾರೆ. ಇಬ್ಬರು ವಿಭಾಗೀಯ ಪ್ರಭಾರಿಗಳನ್ನು ಬಿಜೆಪಿ ಘೋಷಣೆ ಮಾಡಿರುವುದು ವಿಶೆಷವಾಗಿದೆ. ಬಹುತೇಕ ಅವಿರೋಧವಾಗಿ ಇಬ್ಬರು ಆಯ್ಕೆಯಾಗುವ ಸಾಧ್ಯತೆಗಳಿವೆ.
Laxmi News 24×7