ಬೆಂಗಳೂರು: ಎಂಪಿಟಿ, ಎಂಎಸ್ಸಿ, ಮಾಸ್ಟರ್ ಅಲೈಡ್ ಹೆಲ್ತ್ ಸೈನ್ಸ್ ಈ ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಮೆರಿಟ್ ನಿರ್ಧರಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಸೆ.5 ಕೊನೆ ದಿನ. ಆನ್ಲೈನ್ ಮೂಲಕ ನೋಂದಾಯಿಸಿಕೊಂಡು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಕೋರ್ಸ್ಗಳಲ್ಲಿ ಪದವಿ ಮಾಡಿರಬೇಕು. ಕರ್ನಾಟಕದವರಾಗಿರಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಡಿಸಿಇಟಿ: ಎರಡನೇ ಸುತ್ತಿನ ಆಪ್ಷನ್ಸ್ ದಾಖಲು ಆರಂಭ
ಡಿಪ್ಲೊಮಾ ಪದವೀಧರರಿಗೆ ಎಂಜಿನಿಯರಿಂಗ್ 3ನೇ ಸೆಮಿಸ್ಟರ್ಗೆ ನೇರ ಪ್ರವೇಶ ಕಲ್ಪಿಸಲು ಎರಡನೇ ಸುತ್ತಿನ ಸೀಟು ಹಂಚಿಕೆಗೆ ಹೊಸದಾಗಿ ಆಪ್ಷನ್ಸ್ ದಾಖಲಿಸಲು ಅಥವಾ ಬದಲಾಯಿಸಲು/ ತೆಗೆದುಹಾಕಲು ಅವಕಾಶ ನೀಡಲಾಗಿದೆ. ಇದಕ್ಕೆ ಸೆ.5ರಂದು ಮಧ್ಯಾಹ್ನ 1 ಗಂಟೆವರೆಗೆ ಅವಕಾಶ ಇದೆ ಎಂದು ಪ್ರಸನ್ನ ತಿಳಿಸಿದ್ದಾರೆ.
ಸೆ.5ರಂದು ಸಂಜೆ 5ಕ್ಕೆ ತಾತ್ಕಾಲಿಕ ಹಾಗೂ ಸೆ.6ರಂದು ಸಂಜೆ 6ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ಶುಲ್ಕ ಪಾವತಿಸಿಲು ಸೆ.7ರಿಂದ 9ರವರೆಗೆ ಅವಕಾಶ ನೀಡಲಾಗಿದೆ. ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.10 ಕೊನೆ ದಿನ ಎಂದು ಅವರು ವಿವರಿಸಿದ್ದಾರೆ.
ಈ ಸುತ್ತಿನಲ್ಲಿ ಹಂಚಿಕೆಯಾದ ಸೀಟಿಗೆ ಪ್ರವೇಶ ಪಡೆಯುವುದು ಕಡ್ಡಾಯ. ಯಾವುದೇ ಚಾಯ್ಸ್ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
Laxmi News 24×7