Breaking News

ಬರ ಪರಿಸ್ಥಿತಿ ಸಮರ್ಪಕವಾಗಿ ನಿಭಾಯಿಸಲು ನೋಡಲ್ ಅಧಿಕಾರಗಳನ್ನು ನಿಯೋಜಿಸಿ – ಡಿಸಿಗೆ ಹೆಚ್.ಸಿ ಬಾಲಕೃಷ್ಣ ಸೂಚನೆ

Spread the love

ರಾಮನಗರ: ಜಿಲ್ಲೆಯ ಐದು ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿದ್ದು, ಬರ  ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಎಲ್ಲಾ ತಾಲೂಕುಗಳಲ್ಲೂ ನೋಡಲ್ ಅಧಿಕಾರಿಗಳನ್ನು ನಿಯೋಜಿಸುವಂತೆ ಪೌರಾಡಳಿತ ಸಚಿವ ಹೆಚ್.ಸಿ.ಬಾಲಕೃಷ್ಣ  ಅಧಿಕಾರಿಗಳಿಗೆ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆ ವಿಷಯಗಳ ಕುರಿತಂತೆ ಆಯೋಜಿಸಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿಯೋಜಿತ ನೋಡಲ್ ಅಧಿಕಾರಿಗಳು ಪ್ರತಿ ಶುಕ್ರವಾರ ಸಂಬಂಧಿಸಿದ ಕ್ಷೇತ್ರಗಳಿಗೆ ತೆರಳಿ ಅಲ್ಲಿ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಕೈಗೊಳ್ಳಲಾಗುತ್ತಿರುವ ಕ್ರಮಗಳು ಹಾಗೂ ಪರಿಹಾರ ಕ್ರಮಗಳನ್ನು ಸಂಬಂಧಿಸಿದ ಎಲ್ಲಾ ಅಧಿಕಾರಿಗಳ ಸಭೆ ನಡೆಸಿ ಕೂಲಂಕುಷವಾಗಿ ಪರಿಶೀಲಿಸಿ ಅದನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತಂದ ನಂತರ ತಮಗೆ ವರದಿ ನೀಡಬೇಕು ಎಂದರು.

ಅಧಿಕಾರಿಗಳ ಹಂತದಲ್ಲಿಯೇ ಬಗೆಹರಿಸಬಹುದಾದ ಕೆಲವೊಂದು ಸಮಸ್ಯೆಗಳನ್ನು ಬಗೆಹರಿಸಿ, ಅವರ ವ್ಯಾಪ್ತಿಯಲ್ಲಿ ಆಗದಿದ್ದ ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದರೆ ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು. ಬರಗಾಲದ ಸಂದರ್ಭದಲ್ಲಿ ಬೆಳೆ ವಿಮೆ ಅತ್ಯಂತ ಉಪಯುಕ್ತ ಕ್ರಮವಾಗಿದ್ದು, ರೈತರು ತಮ್ಮ ಬೆಳೆಗಳಿಗೆ ಮಾಡಿಸಿದ ವಿಮಾ ಪರಿಹಾರ ಹಣವನ್ನು ಸಕಾಲದಲ್ಲಿ ಪಡೆಯುವಂತಾಗಬೇಕು. ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ 18,000ಕ್ಕೂ ಹೆಚ್ಚು ರೈತರು ಈ ಬಾರಿ ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದು, ಅವರಲ್ಲಿ ಮಾಗಡಿ ತಾಲೂಕಿನಲ್ಲಿ ಅತಿ ಹೆಚ್ಚು ಅಂದರೆ 9,000ಕ್ಕೂ ಹೆಚ್ಚು ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ಬರಗಾಲದ ಸಂದರ್ಭದಲ್ಲಿ ಬೆಳೆ ಹಾನಿಯಾದಾಗ ರೈತರಿಗೆ ಪರಿಹಾರದ ಮೊತ್ತ ಸಕಾಲದಲ್ಲಿ ಪಾವತಿಯಾದರೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ರೈತರು ಬೆಳೆ ವಿಮೆಗೆ ನೋಂದಾಯಿತರಾಗುತ್ತಾರೆ. ಆ ಮೂಲಕ ರೈತರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿದರೆ ಬೆಳೆಮಿಮೆ ಪಾವತಿಸುವ ರೈತರ ಸಂಖ್ಯೆಯು ಹೆಚ್ಚಾಗುತ್ತದೆ. ಇದರಲ್ಲೇನಾದರೂ ಸಮಸ್ಯೆ ಕಂಡು ಬಂದರೆ ಸಚಿವ ಸಂಪುಟ ಸಭೆ, ಕೃಷಿ ಇಲಾಖೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಸಮಸ್ಯೆಗೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ