Breaking News

ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವು! ಇಂದು ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

Spread the love

ಬಾಗಲಕೋಟೆ: ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಿಎಸ್ಎಪ್ ಯೋಧ ಮೃತಪಟ್ಟಿದ್ದಾರೆ. ಹುನಗುಂದ ತಾಲೂಕಿನ ಕೂಡಲಸಂಗಮದ ಮಹಾಂತೇಶ್ ಚೌಧರಿ ಮೃತ ಯೋಧ. ಮಹಾಂತೇಶ್ ಚೌಧರಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇಂದು (ಅ.13) ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಿದೆ.

 

ಸದ್ಯ ಯೋಧ ಮಹಾಂತೇಶ್ ಚೌಧರಿ ರಾಜಸ್ಥಾನದ ಚಾರ್ಲಿ ಬಟಾಲಿಯನ್ 161ರಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ ತಾಯಿ, ತಮ್ಮ, ಪತ್ನಿ, ಇಬ್ಬರು ಪುತ್ರರು, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ಇಂದು ಯೋಧನ ಪಾರ್ಥಿವ ಶರೀರ ಹುಟ್ಟೂರಿಗೆ ಆಗಮಿಸಿದೆ. ಗ್ರಾಮದಲ್ಲಿ ಯೋಧನ ಪಾರ್ಥಿವ ಶರೀರವನ್ನು ಮೆರವಣಿಗೆ ಮಾಡಲಾಗುತ್ತಿದೆ. ಮಧ್ಯಾಹ್ನ ಕೂಡಲಸಂಗಮದ ಯೋಧನ ಹೊಲದಲ್ಲಿ ಸರಕಾರಿ ಹಾಗೂ ಸೇನಾ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ.

 


Spread the love

About Laxminews 24x7

Check Also

ಹೃದಯಾಘಾತದಿಂದ ಸಾವನ್ನಪ್ಪಿದ ಡಾ.ಸಂದೀಪ್ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ

Spread the loveಶಿವಮೊಗ್ಗ/ತುಮಕೂರು: ಕಳೆದ ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ 19 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಈಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ