ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

Spread the love

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40) ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ನಿನ್ನೆ ಕೆಲಸ ಮುಗಿಸಿಕೊಂಡು ತಡರಾತ್ರಿ ಹರೀಶ್ ಅವರು ಕುಶಾಲನಗರದಿಂದ ತಮ್ಮ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು.

ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಹರೀಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೃತ ಹರೀಶ್ ಅವರು ಬಹುಮುಖಿ ಪ್ರತಿಭೆಯಾಗಿದ್ದರು. ವೃತ್ತಿಜೀವನದ ಜೊತೆಗೇ ಹಲವು ಕನ್ನಡ ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ಮತ್ತು ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದರು.


Spread the love

About Laxminews 24x7

Check Also

ಮಾಜಿ ಸಚಿವ ವೆಂಕಟರಮಣಪ್ಪ ಅಗಲಿಕೆಗೆ ಜಿ.ಪರಮೇಶ್ವರ್‌ ಕಂಬನಿ

Spread the loveತುಮಕೂರು: ಗೃಹ ಸಚಿವ ಡಾ. ಜಿ.ಪರಮೇಶ್ವರ್‌  ಅವರು ಪಾವಗಡ ಮಾಜಿ ಶಾಸಕರು ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ