Breaking News

ಚಾಮುಂಡಿ ಬೆಟ್ಟದಲ್ಲಿ ಜು.17 ರಿಂದ ಆಷಾಢ ಮಾಸದ ಪೂಜೆ – 2,000 ರೂ. ಟಿಕೆಟ್ ಖರೀದಿಸಿದ್ರೆ ನೇರ ದರ್ಶನ!

Spread the love

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಜುಲೈ 17 ರಿಂದ ಆಷಾಢ ಮಾಸ ವಿಶೇಷ ಪೂಜೆ  ಆರಂಭವಾಗಲಿದೆ. ಭಕ್ತ ಸಾಗರವೇ ಹರಿದುಬರುವ ಹಿನ್ನೆಲೆ ಮೂರು ದಿನಗಳ ಕಾಲ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಭಕ್ತರಿಗೆ ವಿಶೇಷ ವಾಹನ ಸೌಲಭ್ಯ ಕಲ್ಪಿಸಿದ್ದು, ವಿಶೇಷ ದರ್ಶನಕ್ಕೆ ಬರೋಬ್ಬರಿ 2000 ರೂ. ಟಿಕೆಟ್‌ ದರ ನಿಗದಿ ಮಾಡಲಾಗಿದೆ ಎಂದು ಸಚಿವರಾದ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ಆಷಾಢ ಸಂಭ್ರಮಕ್ಕೆ ಸಿದ್ಧತಾ ಕಾರ್ಯ ಪರಿಶೀಲಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಬಳಿಕ ಮಾಧ್ಯಮಗಳಿಗೆ ವಿವರಣೆ ನೀಡಿದರು.

ಆಷಾಢ ಮಾಸದ ಶುಕ್ರವಾರ, ಶನಿವಾರ ಮತ್ತು ಭಾನುವಾರ (ಆಗಸ್ಟ್‌ 17,18,19) ಮೂರು ದಿನವೂ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧ ಮಾಡಲಾಗಿದೆ. ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ದಿನವೂ ಖಾಸಗಿ ವಾಹನಗಳ ಪ್ರವೇಶ ಇಲ್ಲ ಎಂದು ಮಾಹಿತಿ ನೀಡಿದ್ದಾರೆ.

ವಿಶೇಷ ದರ್ಶನಕ್ಕೆ ಟಿಕೆಟ್‌ ಭಾರೀ ದುಬಾರಿ
ಇನ್ನೂ ಭಕ್ತರ ವಿಶೇಷ ದರ್ಶನಕ್ಕೆ ಇದ್ದ 300 ರೂಪಾಯಿ ಟಿಕೆಟ್ ಅನ್ನು ಈ ಬಾರಿ ರದ್ದು ಮಾಡಲಾಗಿದೆ. 2 ಸಾವಿರ ರೂಪಾಯಿ ಟಿಕೆಟ್ ಖರೀದಿ ಮಾಡಿದರೆ ಸರತಿ ಇಲ್ಲದೇ ನೇರವಾಗಿ ದೇವರ ದರ್ಶನ ಪಡೆಯಬಹುದು. ಇನ್ನೂ ಈ ಟಿಕೆಟ್‌ ಜೊತೆಗೆ ಚಾಮುಂಡೇಶ್ವರಿ ಫೋಟೊ, ಲಾಡು ಪ್ರಸಾದ ಒಳಗೊಂಡ ವಿಶೇಷ ಕಿಟ್ ಕೊಡಲಾಗುತ್ತದೆ.

ವಿಐಪಿ ದರ್ಶನಕ್ಕೆ ಸಮಯ ನಿಗದಿ
ಇನ್ನೂ ಮುಂಜಾನೆ 5.30 ರಿಂದ 9.30ರ ವರೆಗೆ ಮಾತ್ರ ವಿಐಪಿ ಹಾಗೂ ವಿವಿಐಪಿಗೆ ದರ್ಶನಕ್ಕೆ ವ್ಯವಸ್ಥೆ ಇರಲಿದೆ. ಹೊರತುಪಡಿಸಿ ಶಿಷ್ಟಾಚಾರದ ನಿಯಮಕ್ಕೆ ಒಳಪಟ್ಟವರು ಇದ್ದರೆ ಮಾತ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಶಿಫಾರಸು ಪತ್ರಗಳನ್ನು ತಂದವರಿಗೆ ಪ್ರತ್ಯೇಕ ದರ್ಶನದ ವ್ಯವಸ್ಥೆ ಇಲ್ಲ ಎಂದು ಸಚಿವರು ಖಡಕ್ಕಾಗಿ ಹೇಳಿದ್ದಾರೆ.

ಇನ್ನೂ ವಿಐಪಿ ಮತ್ತು ವಿವಿಐಪಿ ಗಳ ವಾಹನಗಳು ಮಹಿಷಾಸುರನ ಪ್ರತಿಮೆ ವೃತ್ತದ ಬಳಿ ಪಾರ್ಕಿಂಗ್ ಮಾಡಬೇಕು. ಮೆಟ್ಟಿಲು ಹತ್ತಿಕೊಂಡು ಬರುವ ಬರುವ ಭಕ್ತಾಧಿಗಳಿಗೆ ಹಾಲು ಮತ್ತು ನೀರು ಸಿಗುವಂತಹ ವ್ಯವಸ್ಥೆ ಮಾಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ಆಗಸ್ಟ್‌ 7 ರವರೆಗೂ ವಿಶೇಷ ಪೂಜೆ
ಚಾಮುಂಡಿ ಬೆಟ್ಟಕ್ಕೆ ಆಷಾಢ ಮಾಸದಲ್ಲಿ ಲಕ್ಷಾಂತರ ಭಕ್ತಾದಿಗಳು ಬರ್ತಾರೆ. ಜುಲೈ 17 ರಿಂದ ಆಗಸ್ಟ್ 7 ರವರಗೂ ಆಷಾಢ ಮಾಸದ ವಿಶೇಷ ಪೂಜೆ ನಡೆಯಲಿದೆ. ಸಾಮಾನ್ಯ ಜನರಿಗೆ ತೊಂದರೆ ಆಗಬಾರದು. ಲಲಿತ ಮಹಲ್ ಪ್ಯಾಲೇಸ್ ಮೈದಾನದಿಂದ ವಾಹನದ ವ್ಯವಸ್ಥೆ ಇದೆ. ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ