Breaking News

ಚಾಮುಂಡಿ ಬೆಟ್ಟದಲ್ಲಿ ಜು.17 ರಿಂದ ಆಷಾಢ ಮಾಸದ ಪೂಜೆ – ಸಿದ್ಧತೆ ಪರಿಶೀಲಿಸಿದ ಯತೀಂದ್ರ ಸಿದ್ದರಾಮಯ್ಯ

Spread the love

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಸಂಭ್ರಮ ಕಳೆಗಟ್ಟಿದೆ, ವಿವಿಧ ಕಾರ್ಯಕ್ರಮಗಳಿಗೆ ಭರದ ಸಿದ್ಧತೆ ನಡೆಯುತ್ತಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ.  ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಭೇಟಿ ನೀಡಿ ಅಗತ್ಯ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದ್ದಾರೆ.

ನಗರದ ಚಾಮುಂಡಿ ಬೆಟ್ಟಕ್ಕೆ  ಭೇಟಿ ನೀಡಿದ್ದ ಅವರಿಂದು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ. ಜು.17 ರಿಂದ ಶುರುವಾಗಲಿರುವ ಆಷಾಢ ಮಾಸದ ಸಿದ್ಧತೆಗಳನ್ನ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ವೇಳೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿ, ಈಗಾಗಲೇ ಸಿದ್ಧತೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೀನಿ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಅನುಕೂಲ ಮಾಡಿ ಕೊಡಬೇಕು. ವಿಐಪಿಗಳಿಗೆ ಈಗಾಗಲೇ ಸಮಯ ನಿಗದಿ ಮಾಡಿದ್ದೇವೆ. 9:30 ರ ಒಳಗೆ ಎಲ್ಲಾ ವಿಐಪಿಗಳು ದರ್ಶನ ಮಾಡಬೇಕು. ಬೇಕಾದ ಸಮಯದಲ್ಲಿ ವಿಐಪಿಗಳು ಬಂದು ದರ್ಶನ ಮಾಡುವಂತಿಲ್ಲ. ವಿಐಪಿ ಗಳಿಗೆ ವಾಹನಗಳನ್ನ ಮಹಿಷಾಸುರ ಪ್ರತಿಮೆಯ ಬಳಿ ಪಾರ್ಕಿಂಗ್ ಮಾಡಬೇಕು. ವಿಐಪಿ ಹೆಸರು ಹೇಳಿಕೊಂಡು ಬಂದರೆ ಒಳಗೆ ಬಿಡಲ್ಲ ಎಂದರು.

ಬೆಳಗ್ಗೆ 5 ಗಂಟೆ ಬಳಿಕ ಪ್ರವೇಶ
ಈಗಾಗಲೇ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಕೂಡ ಆಷಾಢ ಮಾಸ ಪೂಜೆ ಸಿದ್ಧತೆ ಪರಿಶೀಲಿಸಿದ್ದಾರೆ. ಜು.17, 24, 31 ಆಗಸ್ಟ್‌ 7 ರಂದು ಆಢಾಶ ಶುಕ್ರವಾರ ಮತ್ತು ಆ.4 ರಂದು ಚಾಮುಂಡೇಶ್ವರಿ ವರ್ಧಂತಿ ಉತ್ಸವ ಇದೆ. 4 ವಾರಗಳ ವಾರಾಂತ್ಯದಂದು ಲಲಿತಮಹಲ್‌ ಮೈದಾನ ಮತ್ತು ನಗರ ಬಸ್‌ ನಿಲ್ದಾಣದಿಂದ ಬೆಳಗ್ಗೆ 6:30ಕ್ಕೆ ಬಸ್‌ ಸೌಲಭ್ಯ ಇರಲಿದ್ದು, ರಾತ್ರಿ 8:30 ಕ್ಕೆ ಕೊನೆಯಾಗಲಿದೆ. ಬೆಟ್ಟದ ಪಾದದ ಕಾಲ್ನಡಿಗೆಯಿಂದ ಬರುವವರಿಗೆ ಬೆಳಗ್ಗೆ 5 ಗಂಟೆಯ ನಂತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಅದಕ್ಕೂ ಮುನ್ನವೇ ಕಾಯೋದು ಬೇಡ ಎಂದು ಹೇಳಿದ್ದಾರೆ.

ವಿಶೇಷ ದರ್ಶನಕ್ಕೆ ಟಿಕೆಟ್‌ ಭಾರೀ ದುಬಾರಿ
ಇನ್ನೂ ಭಕ್ತರ ವಿಶೇಷ ದರ್ಶನಕ್ಕೆ ಇದ್ದ 300 ರೂಪಾಯಿ ಟಿಕೆಟ್ ಅನ್ನು ಈ ಬಾರಿ ರದ್ದು ಮಾಡಲಾಗಿದೆ. 2 ಸಾವಿರ ರೂಪಾಯಿ ಟಿಕೆಟ್ ಖರೀದಿ ಮಾಡಿದರೆ ಸರತಿ ಇಲ್ಲದೇ ನೇರವಾಗಿ ದೇವರ ದರ್ಶನ ಪಡೆಯಬಹುದು. ಇನ್ನೂ ಈ ಟಿಕೆಟ್‌ ಜೊತೆಗೆ ಚಾಮುಂಡೇಶ್ವರಿ ಫೋಟೊ, ಲಾಡು ಪ್ರಸಾದ ಒಳಗೊಂಡ ವಿಶೇಷ ಕಿಟ್ ಕೊಡಲಾಗುತ್ತದೆ.

ವಿಐಪಿ ದರ್ಶನಕ್ಕೆ ಸಮಯ ನಿಗದಿ
ಇನ್ನೂ ಮುಂಜಾನೆ 5.30 ರಿಂದ 9.30ರ ವರೆಗೆ ಮಾತ್ರ ವಿಐಪಿ ಹಾಗೂ ವಿವಿಐಪಿಗೆ ದರ್ಶನಕ್ಕೆ ವ್ಯವಸ್ಥೆ ಇರಲಿದೆ. ಹೊರತುಪಡಿಸಿ ಶಿಷ್ಟಾಚಾರದ ನಿಯಮಕ್ಕೆ ಒಳಪಟ್ಟವರು ಇದ್ದರೆ ಮಾತ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಶಿಫಾರಸು ಪತ್ರಗಳನ್ನು ತಂದವರಿಗೆ ಪ್ರತ್ಯೇಕ ದರ್ಶನದ ವ್ಯವಸ್ಥೆ ಇಲ್ಲ. ವಿಐಪಿ ಮತ್ತು ವಿವಿಐಪಿ ಗಳ ವಾಹನಗಳು ಮಹಿಷಾಸುರನ ಪ್ರತಿಮೆ ವೃತ್ತದ ಬಳಿ ಪಾರ್ಕಿಂಗ್ ಮಾಡಬೇಕು. ಮೆಟ್ಟಿಲು ಹತ್ತಿಕೊಂಡು ಬರುವ ಬರುವ ಭಕ್ತಾಧಿಗಳಿಗೆ ಹಾಲು ಮತ್ತು ನೀರು ಸಿಗುವಂತಹ ವ್ಯವಸ್ಥೆ ಇರಲಿದೆ.

ಆಗಸ್ಟ್‌ 7 ರವರೆಗೂ ವಿಶೇಷ ಪೂಜೆ
ಚಾಮುಂಡಿ ಬೆಟ್ಟಕ್ಕೆ ಆಷಾಢ ಮಾಸದಲ್ಲಿ ಲಕ್ಷಾಂತರ ಭಕ್ತಾದಿಗಳು ಬರ್ತಾರೆ. ಜುಲೈ 17 ರಿಂದ ಆಗಸ್ಟ್ 7 ರವರಗೂ ಆಷಾಢ ಮಾಸದ ವಿಶೇಷ ಪೂಜೆ ನಡೆಯಲಿದೆ. ಸಾಮಾನ್ಯ ಜನರಿಗೆ ತೊಂದರೆ ಆಗಬಾರದು. ಲಲಿತ ಮಹಲ್ ಪ್ಯಾಲೇಸ್ ಮೈದಾನದಿಂದ ವಾಹನದ ವ್ಯವಸ್ಥೆ ಇದೆ. ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ.


Spread the love

About Laxminews 24x7

Check Also

ಶಾಹಾಪುರದ ಚಿಂತಾಮಣರಾವ್ ಪ್ರೌಢಶಾಲೆಯಲ್ಲಿ ಉಚಿತ ಕೃತಕ ಬುದ್ಧಿಮತ್ತೆ (AI) ಹಾಗೂ ಕೋಡಿಂಗ್ ಪುಸ್ತಕಗಳ ವಿತರಣೆ

Spread the loveಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಭಯ ಪಾಟೀಲ ಅವರ ಮಾರ್ಗದರ್ಶನದಲ್ಲಿ ಚಾಣಕ್ಯ ಎಜುಕೇಶನ್ ಅಂಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ